ಹೊಸ ದಿಗಂತ ವರದಿ, ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 983 ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. 370 ಮಂದಿ ಗುಣಮುಖರಾಗಿದ್ದಾರೆ. ಬುಧವಾರ ಜಿಲ್ಲೆಯಲ್ಲಿ ಕೊರೋನಾದಿಂದ ಮೂವರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ.9.53 ದಾಖಲಾಗಿದೆ.
ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 124288 ಕ್ಕೆ ಏರಿಕೆಯಾಗಿದೆ. ಈ ಪೈಕಿ 5574 ಸಕ್ರಿಯ ಪ್ರಕರಣಗಳು. 117000 ಮಂದಿ ಗುಣಮುಖರಾಗಿದ್ದಾರೆ. 1714 ಮಂದಿ ಮೃತಪಟ್ಟಿದ್ದಾರೆ.
ಮಂಗಳೂರು ತಾಲೂಕಿನಲ್ಲಿ ಬುಧವಾರ ನಾಲ್ಕು ಕ್ಲಸ್ಟರ್ ಪ್ರಕರಣ ಗುರುತಿಸಲಾಗಿದೆ. ಮಂಗಳೂರು ತಾಲೂಕಿನ ಖಾಸಗಿ ಕಾಲೇಜಿನಲ್ಲಿ 67ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, 39 ಮಂದಿಗೆ ಸೋಂಕು ದೃಢಪಟ್ಟಿದೆ. ಸುರತ್ಕಲ್‌ನಲ್ಲಿ 60 ಮಂದಿಯ ಪೈಕಿ 10ಮಂದಿಗೆ ಕೊರೋನಾ ದೃಢವಾಗಿದೆ. ಖಾಸಗಿ ಕಾಲೇಜು ಹಾಸ್ಟೆಲ್‌ನಲ್ಲಿ 56 ಜನರ ಪೈಕಿ 8 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇನ್ನೊಂದು ಕಾಲೇಜು ಹಾಸ್ಟೆಲ್‌ನ ೪೩ ಮಂದಿಯನ್ನು ಪರೀಕ್ಷೆ ನಡೆಸಲಾಗಿದ್ದು, 6 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.