ಹೊಸದಿಗಂತ ಡಿಜಿಟಲ್ ಡೆಸ್ಕ್:
ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಡಾಲಿ ತನ್ನ ಬಾಳಸಂಗಾತಿಯನ್ನು ಪರಿಚಯಿಸಿದ್ದಾರೆ. ಭಾವಿ ಪತ್ನಿ ಜೊತೆಗಿನ ಸುಂದರವಾದ ವಿಡೀಯೋ ಹಂಚಿಕೊಳ್ಳುವ ಮೂಲಕ ಧನಂಜಯ ಮದುವೆ ಸುದ್ದಿಯನ್ನು ಹಂಚಿಕೊಂಡಿದ್ದಾರೆ.
ಯಾರನ್ನು ಮುದುವೆಯಾಗುತ್ತಾರೆ ಎನ್ನುವ ಕುತೂಹಲ ಅಭಿಮಾನಿಗಳಿತ್ತು. ಇದೀಗ ಆ ಎಲ್ಲಾ ಕುತೂಹಲಕ್ಕೆ ತೆರೆ ಎಳೆದಿದ್ದಾರೆ. ಡಾಲಿ ಮದುವೆಯಾಗುತ್ತಿರುವ ಹುಡುಗಿಯ ಹೆಸರು ಧನ್ಯತಾ. ಗೈನೋಕಾಲಾಜಿಸ್ಟ್ ಆಗಿರುವ ಧನ್ಯತಾ ಧನಂಜಯ ಅವರನ್ನು ಕೈ ಹಿಡುಯುತ್ತಿದ್ದಾರೆ.
ಧನಂಜಯ ಮತ್ತು ಧನ್ಯತಾ ಇಬ್ಬರು ಅನೇಕ ವರ್ಷಗಳ ಪರಿಚಯ, ಈ ಪರಿಚಯ ಪ್ರೀತಿಗೆ ತಿರುಗಿ ಇದೀಗ ಹಸೆಮಣೆ ಏರುತ್ತಿದ್ದಾರೆ. ಚಿತ್ರದುರ್ಗ ಮೂಲದ ಧನ್ಯತಾ ಓದಿದ್ದು ಮೈಸೂರಿನಲ್ಲಿ. ಅರಸೀಕೆರೆ ಮೂಲದ ನಟ ಧನಂಜಯ ಓದಿದ್ದು ಕೂಡ ಮೈಸೂರಿನಲ್ಲಿ. ಸದ್ಯ ಶೇರ್ ಮಾಡಿರುವ ವಿಡಿಯೋದಲ್ಲಿ ಜೋಡಿ ಹಕ್ಕಿಗಳು ಸುಂದರವಾಗಿ ಕಂಗೊಳಿಸುತ್ತಿದ್ದಾರೆ. ಇಬ್ಬರ ಮುದ್ದಾದ ವಿಡಿಯೋಗೆ ಅಭಿಮಾನಿಗಳಿಂದ ಪ್ರೀತಿಯ ಶುಭಾಶಯ ಹರಿದುಬರುತ್ತಿದೆ.
ಅಂದಹಾಗೆ ಫೆಬ್ರವರಿ 16ರಂದು ಮೈಸೂರಿನ ಎಕ್ಸಿಬಿಷನ್ ಗ್ರೌಂಡ್‌ನಲ್ಲಿ ಧನಂಜಯ ಮತ್ತು ಧನ್ಯತಾ ಮದುವೆ ನಡೆಯಲಿದೆ.