ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿರಿಯ ದಲಿತ ಹೋರಾಟಗಾರ ಜಿಗಣಿ ಶಂಕರ್ ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅನೇಕಲ್ ತಾಲೂಕಿನ ಬಂಡೇನಲ್ಲಸಂದ್ರ ಗ್ರಾಮದ ನಿವಾಸಿ ಜಿಗಣಿ ಶಂಕರ್. ಅವರು ದಲಿತ ಸಂಘಟನೆ ಹಾಗೂ ದಲಿತ ಪಕ್ಷಕಟ್ಟಿ ಸಾಕಷ್ಟು ಹೋರಾಟ ಮಾಡಿದ್ದರು.
ಖಾಸಗಿ ಕಾರ್ಯಕ್ರಮಕ್ಕೆ ಹಾಜರಾಗಲು ಕೋಲಾರಕ್ಕೆ ಹೋಗಿದ್ದಾಗ ಹೃದಯಾಘಾತ ಸಂಭವಿಸಿದೆ. ಇಂದು ಸಂಜೆ 4 ಗಂಟೆಗೆ ಬಂಡೇನಲ್ಲಸಂದ್ರ ಗ್ರಾಮದ ಜಮೀನಿನಲ್ಲಿ ಅವರ ಅಂತ್ಯಕ್ರಿಯೆ ನಡೆಸುವುದಾಗಿ ಕುಟುಂಬಿಕರು ತಿಳಿಸಿದ್ದಾರೆ.