ಹಾಲಿನ ವ್ಯಾನ್‌ನಲ್ಲಿ ಅಂಬೇಡ್ಕರ್ ಹಾಡು ಹಾಕಿದ ದಲಿತನ ಖಾಸಗಿ ಅಂಗಕ್ಕೆ ಒದ್ದು ಹಲ್ಲೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಹಾಲಿನ ವಾಹನದಲ್ಲಿ ಅಂಬೇಡ್ಕರ್ ಅವರ ʼಜೈ ಭೀಮ್ʼ ಹಾಡು ಹಾಕಿದ್ದಕ್ಕೆ ದಲಿತ ಯುವಕನ ಖಾಸಗಿ ಭಾಗಕ್ಕೆ ಒದ್ದು ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆಯೊಂದು ಗುಬ್ಬಿ ತಾಲೂಕಿನ ಕಸಬಾ ಹೋಬಳಿಯ ಮುದ್ದನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಹಲ್ಲೆಗೊಳಗಾದ ಯುವಕನನ್ನು 19 ವರ್ಷದ ದೀಪು ಎಂದು ತಿಳಿದುಬಂದಿದೆ. ದೀಪು ತುಮಕೂರು ಗ್ರಾಮಾಂತರದ ಸಿರಿವರ ಗ್ರಾಮದ ದಲಿತ ಸಮುದಾಯದ ಯುವಕ ಎಂದು ತಿಳಿದುಬಂದಿದೆ. ಇದೀಗ ಗುಬ್ಬಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರೈತರಿಂದ ಹಾಲು ಖರೀದಿಸುವ ಕಾರ್ಯವನ್ನು ನಿರ್ವಹಿಸುತ್ತಿದ್ದ ದೀಪು (19) ವ್ಯಾನ್ ಚಾಲಕ ನರಸಿಂಹ ಮೂರ್ತಿಯೊಂದಿಗೆ ಪ್ರಯಾಣಿಸುತ್ತಿದ್ದ. ವಾಹನದಲ್ಲಿ ಅಂಬೇಡ್ಕರ್ ಅವರ ಹಾಡನ್ನು ಹಾಕಿದ್ದರು. ಸಂಜೆ 6 ಗಂಟೆ ಸುಮಾರಿಗೆ ತಾಲ್ಲೂಕಿನ ಕಸಬಾ ಹೋಬಳಿ ಮುದ್ದನಹಳ್ಳಿ ಗ್ರಾಮದ ರೈಲ್ವೆ ಇಲಾಖೆಯ ಪೊಲೀಸ್ ಅಧಿಕಾರಿ ಚಂದ್ರಶೇಖರ್ ಮತ್ತು ಮತ್ತೊಬ್ಬ ವ್ಯಕ್ತಿ ನರಸಿಂಹರಾಜು ಎಂಬುವರು ಆರ್‌ಪಿಎಫ್ ಸಿಬ್ಬಂದಿಯಂತೆ ನಟಿಸಿ ವ್ಯಾನ್ ಅನ್ನು ಅಡ್ಡಗಟ್ಟಿದ್ದಾರೆ. ಈ ವೇಳೆ ಹಾಡನ್ನು ನಿಲ್ಲಿಸುವಂತೆ, ಮತ್ತೆ ಹಾಕದಂತೆ ಎಚ್ಚರಿಸಿದ್ದಾರೆ.

ಇದೇ ವೇಳೆ ಯುವಕರ ಜಾತಿ ಪ್ರಶ್ನಿಸಿದ್ದಾರೆ. ಯುವಕರು ಎಸ್ಸಿ-ಮಾದಿಗ ಸಮುದಾಯ (ದಲಿತ ಜಾತಿ)ವೆಂದು ಹೇಳಿದ್ದು, ಈ ವೇಳೆ ಇಬ್ಬರನ್ನೂ ವಾಹನದಿಂದ ಹೊರಗೆಳೆದು ಮನಬಂದಂತೆ ಥಳಿಸಿದ್ದಾರೆ. ದೀಪು ಅವರ ಖಾಸಗಿ ಭಾಗಕ್ಕೆ ಒದ್ದಿದ್ದಾರೆ. ಇದರಿಂದ ದೀಪು ಅವರು ಗಂಭೀರವಾಗಿ ಗಾಯಗೊಂಡಿದ್ದು, ನೋವಿನಿಂಗ ಕೂಗಿದ್ದಾರೆ. ಬಳಿಕ ಸ್ಥಳಕ್ಕೆ ಬಂದ ಜನರು ಇಬ್ಬರನ್ನೂ ಗುಬ್ಬಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!