ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ದಲಿತರಿಗೆ ನಂಬಿಕೆಯಿದೆ: ಸಚಿವ ಅರ್ಜುನ್‌ ರಾಮ್‌ ಮೇಘವಾಲ್‌

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಮತ್ತು ನೀತಿಗಳಲ್ಲಿ ದಲಿತರು ನಂಬಿಕೆ ಮತ್ತು ವಿಶ್ವಾಸ ತೋರಿಸಿದ್ದಾರೆ ಎಂದು ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಆಡಳಿತದ ಮೇಲೆ ಜನರಿಗೆ ವಿಶ್ವಾಸ ಮೂಡುತ್ತಿರುವುದು ಕಾಂಗ್ರೆಸ್‌ಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ ಎಂದರು.

‘ಮೋದಿ ಸರ್ಕಾರದ ಯೋಜನೆಗಳು ಮತ್ತು ಕಾರ್ಯಕ್ರಮಗಳು ಜನರ ವಿಶ್ವಾಸವನ್ನು ಇನ್ನಷ್ಟು ಹೆಚ್ಚಿಸಿವೆ. ದಲಿತರು ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ನಂಬಿಕೆ ಇಟ್ಟಿದ್ದಾರೆ ಎಂದು ಹೇಳಿದರು.

ರಾಜಸ್ಥಾನ ಕಾಂಗ್ರೆಸ್‌ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ ಅವರು, ರಾಜ್ಯದಲ್ಲಿ ಅಭಿವೃದ್ದಿ ಕುಂಠಿತಗೊಂಡಿದ್ದು, ಆಡಳಿತ ಕಣ್ಮರೆಯಾಗಿದೆ. ಜನರನ್ನು ಓಲೈಕೆ ಮಾಡುವುದರಲ್ಲಿಯೇ ಸರ್ಕಾರ ಮಗ್ನವಾಗಿದೆ ಎಂದು ಕಿಡಿಕಾರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!