ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇವೇಗೌಡರ ತವರು ಜಿಲ್ಲೆ ಹಾಸನದಲ್ಲಿ ತಮ್ಮ ಶಕ್ತಿ ಪ್ರದರ್ಶಿಸಿ ಜೆಡಿಎಸ್ ನೆಲೆಯನ್ನೇ ಗುರಿಯಾಗಿಸಿಕೊಂಡಿರುವ “ಕೈ” ಪಡೆಗಳನ್ನು ಎದುರಿಸಲು ದಳಪತಿಗಳು ಸಜ್ಜಾಗಿದ್ದಾರೆ.
ಮಂಡ್ಯದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಅಭಿನಂದನಾ ಸಮಾರಂಭ ನಡೆಸುವ ಮೂಲಕ ಜನಕಲ್ಯಾಣ ಸಮಾವೇಶಕ್ಕೆ ಸೆಡ್ಡು ಒಡೆಯಲು ಸಿದ್ಧತೆ ನಡೆಸಿದೆ.
ಉಪಚುನಾವಣೆಯಲ್ಲಿ ಚನ್ನಪಟ್ಟಣ ಸೇರಿದಂತೆ ಮೂರು ಕ್ಷೇತ್ರಗಳನ್ನು ಗೆದ್ದಿರುವ ಕಾಂಗ್ರೆಸ್, ಆರಂಭದಲ್ಲಿ ಮೈಸೂರು ಪ್ರದೇಶವನ್ನು ವಶಪಡಿಸಿಕೊಳ್ಳಲು ಮುಂದಾಗಿದೆ. ಮಾಜಿ ಪ್ರಧಾನಿ ದೇವೇಗೌಡರ ಪ್ರಾಬಲ್ಯವಿರುವ ಹಾಸನದಲ್ಲಿ ಜನಕಲ್ಯಾಣ ಹೆಸರಲ್ಲಿ ಬೃಹತ್ ಸಮಾವೇಶ ನಡೆಸುವ ಮೂಲಕ ತಮ್ಮ ಶಕ್ತಿ ಪ್ರದರ್ಶಿಸಿದರು.
ಸಂಸದರ ಬಲ ಪ್ರದರ್ಶನಕ್ಕೆ ತಕ್ಕ ಉತ್ತರ ನೀಡಲು ಜೆಡಿಎಸ್ ಪ್ಲಾನ್ ಮಾಡಿದ್ದು, ಕುಮಾರಸ್ವಾಮಿ ಅವರ ಜನ್ಮ ದಿನಾಚರಣೆ ಅಂಗವಾಗಿ ಮಂಡ್ಯದಲ್ಲಿ ಹೆಚ್‌ಡಿಕೆ ಅಭಿನಂದನಾ ಕಾರ್ಯಕ್ರಮ ಎಂಬ ಅದ್ಧೂರಿ ಸಮಾವೇಶ ನಡೆಸಲು ಸಿದ್ಧತೆ ನಡೆಸಿದೆ.