ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದು, ಅವರ ಮಾತುಗಳೆಲ್ಲ ಅಹಂಕಾರದ ಮಾತುಗಳು ಎಂದು ಹೇಳಿದ್ದಾರೆ.
ಕುಮಾರಸ್ವಾಮಿ ಅವರು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಹಿಂದೆ ಪೈಲ್ವಾನರ ಹಾಗೇ ಭುಜ ಹಾಗೂ ತೊಡೆ ತಟ್ಟಿದ್ದರು ನಾವೆಂದು ಈ ರೀತಿ ಮಾಡಿಲ್ಲ. ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆ ಜಾತ್ಯತೀತ ಪದವನ್ನು ಅಳಿಸಲು ಕಾಂಗ್ರೆಸ್ ನಾಯಕರು ಉತ್ಸುಕರಾಗಿದ್ದಾರೆ. ಜಾತಿ ರಾಜಕಾರಣ ಮಾಡುತ್ತಿರುವವರು ಕಾಂಗ್ರೆಸಿಗರು ನಾವಲ್ಲ ಎಂದು ಹೇಳಿದರು.
ಎರಡು ದಿನಗಳ ಕಾಲ ಮೈಸೂರು ಮತ್ತು ಚಾಮರಾಜನಗರಕ್ಕೆ ಭೇಟಿ ನೀಡುವ ಯೋಜನೆ ಇದೆ. ಚಾಮರಾಜನಗರದಲ್ಲಿ ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ವೇಳೆ ದೇವೇಗೌಡರು ಕೂಡ ಜೊತೆ ಸೇರುವುದಾಗಿ ಹೇಳಿದರು.