ಹೊಸ ದಿಗಂತ ವರದಿ,ಮುಂಡಗೋಡ:
ಪಟ್ಟಣದ ಹೊರವಲಯದ ತೋಟವೊಂದರಲ್ಲಿ ಕುರಿ ಸಾಕಾಣಿಕೆ ಘಟಕಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ೭೮ ಕುರಿಗಳು ಸುಟ್ಟು ಕರಕಲಾದ ಘಟನೆ ಬುಧವಾರ ನಡೆದಿದೆ.
ಕಲಘಟಗಿ ರಸ್ತೆಯಲ್ಲಿರುವ ನಜೀರ ಅಹ್ಮದ ದರ್ಗಾವಾಲೆ ಎಂಬುವರು ತೋಟ. ಇವರು ತಮ್ಮ ತೋಟದಲ್ಲಿ ಕುರಿ ಸಾಕಾಣಿಕೆ ಮಾಡಿದ್ದರು. ಬೆಳಿಗ್ಗೆಯಿಂದ ತೋಟದಲ್ಲಿ ಇದ್ದು ಮಧ್ಯಾಹ್ನದ ವೇಳೆ ಊಟಕ್ಕೆಂದು ಮನೆಯ ಕಡೆ ಹೋಗಿದ್ದಾರೆ. ಈ ವೇಳೆ ವಿದ್ಯುತ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಆವರಿಸಿ ೭೮ ಕುರಿಗಳು ಸುಟ್ಟ ಕರಕಲಾಗಿದೆ. ಒಂದು ಕುರಿ ಈ ಅವಘಡದಿಂದ ಬದುಕುಳಿದಿದೆ. ವಿಷಯ ತಿಳಿದು ಅಗ್ನಿಶಾಮಕದಳವರು ಬೆಂಕಿ ನಿಯಂತ್ರಿಸಿದರಾದರೂ ಅಷ್ಟರೊಳಗೆ ಕುರಿಗಳು ಮೃತಪಟ್ಟಿವೆ. ಈ ಅವಘಡದಿಂದ ಲಕ್ಷಾಂತರ ರೂ ನಷ್ಟಯಾಗಿದೆ. ಘಟನಾ ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪಶುವೈದ್ಯರು ಭೇಟಿ ನೀಡಿ ಮರಣೋತ್ತರ ಪರೀಕ್ಷೆ ನಡೆಸಿದರು.