Sunday, March 26, 2023

Latest Posts

ನರ ಹಂತಕ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ವಾಹನಗಳ ಜಖಂ: ಏಳು ಮಂದಿ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನರ ಹಂತಕ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಗುರುವಾರ ರಾತ್ರಿ ಕೊಂಬಾರಿನ ಮಂಡೆಕರ ಬಳಿ ಪೊಲೀಸ್, ಅರಣ್ಯ ಇಲಾಖಾ ವಾಹನಗಳಿಗೆ ಹಾನಿ ಮಾಡಿದ ಆರೋಪದಲ್ಲಿ 7 ಮಂದಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.

ಘಟನೆಯ ಬಗ್ಗೆ ಅರಣ್ಯ ಇಲಾಖಾಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದು, ಕೊಂಬಾರು ಗ್ರಾಮದ ಅರಣ್ಯ ಪ್ರದೇಶದಲ್ಲಿ ಕಾಡಾನೆ ಹಿಡಿಯುವ ಕಾರ್ಯಾಚರಣೆಯಲ್ಲಿ ಕಾಡಾನೆಯು ಸೆರೆಸಿಕ್ಕಿದೆ. ಕಾಡಾನೆಯನ್ನು ಅರರಣ್ಯಾಧಿಕಾರಿಗಳು ದುಬಾರೆ ಆನೆಬಿಡಾರಕ್ಕೆ ಬಿಟ್ಟು ಬರಲು ಮುಂದಾದಾಗ ಸಮಯ ರಾತ್ರಿ 9 ಗಂಟೆಗೆ ಕೆಲವು ಜನರು ಸ್ಥಳಕ್ಕೆ ಬಂದು ಕಾಡಾನೆ ತುಂಬಿಸಿದ ಲಾರಿಯನ್ನು ತಡೆದು ನಿಲ್ಲಿಸಿ ಹಿಡಿದಿರುವ ಆನೆಯನ್ನು ಇಲ್ಲಿಯೇ ನಿಲ್ಲಿಸಿ, ಇತರ ಕಾಡಾನೆಗಳನ್ನು ಸೆರೆಹಿಡಿದು ಒಟ್ಟಿಗೆ ಎಲ್ಲಾ ಆನೆಗಳನ್ನು ತೆಗೆದುಕೊಂಡು ಹೋಗಬೇಕು ಎಂದು ವಾಗ್ವಾದ ಮಾಡಿದ್ದಾರೆ.

ಬಳಿಕ ಪಿರ್ಯಾದುದಾರರು ಕಾಡಾನೆಯನ್ನು ಹೆಚ್ಚು ಸಮಯ ಲಾರಿಯಲ್ಲಿ ನಿಲ್ಲಿಸಲು ಆಗುವುದಿಲ್ಲ ಆದ ಕಾರಣ ನಾವು ಮೊದಲು ಸೆರೆಹಿಡಿದ ಆನೆಯನ್ನು ಬಿಟ್ಟು ಬಂದು ಉಳಿದ ಕಾಡಾನೆಗಳನ್ನು ಸೆರೆಹಿಡಿಯುವುದಾಗಿ ಹೇಳಿರುತ್ತಾರೆ. ಆದರೆ ಆರೋಪಿತರು ಮಾತು ಕೇಳದೇ ವಾಗ್ವಾದ ಮಾಡಿರುತ್ತಾರೆ. ನಂತರ ಪಿರ್ಯಾದುದಾರರು ಗಲಾಟೆಯಾಗುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಬಂದು ಜನರಿಗೆ ತಿಳುವಳಿಕೆ ಹೇಳಿದರು ಕೇಳದೆ ಆರೋಪಿತರು ಏಕಾಏಕಿ ಸಮಯ ಸುಮಾರು 09.30 ಗಂಟೆಗೆ ಸಮವಸ್ತ್ರದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರಿಗೂ ಮತ್ತು ಅರಣ್ಯ ಸಿಬ್ಬಂದಿಯವರಿಗೂ ಕಲ್ಲು ತೂರಾಟ ಮಾಡಿರುತ್ತಾರೆ.ಕಲ್ಲು ತೂರಾಟದಿಂದ ಅರಣ್ಯ ಇಲಾಖೆ ಯ ಸಿಬ್ಬಂದಿಗಳಿಗೆ ಹಾಗೂ ಪೊಲೀಸರಿಗೂ ಗಾಯಗಳಗಿರುತ್ತದೆ.

ಬಳಿಕ ಆರೋಪಿತರು ಸ್ಥಳದಲ್ಲಿ ನಿಲ್ಲಿಸಿದ್ದ ಅರಣ್ಯ ಇಲಾಖಾ ವಾಹನ ಹಾಗೂ ಪೊಲೀಸು ಇಲಾಖಾ ವಾಹನಗಳ ಮೇಲೂ ಕಲ್ಲು ತೂರಾಟ ಮಾಡಿ ವಾಹನಗಳನ್ನು ಜಖಂ ಮಾಡಿರುತ್ತಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಆರೋಪಿಗಳ ವಿರುಧ್ಧ ಸರಕಾರಿ ಕರ್ತವ್ಯ ಕ್ಕೆ ಅಡ್ಡಿ, ಸರಕಾರಿ ವಾಹನಗಳಿಗೆ ಹಾನಿ ಮುಂತಾದ ಹಲವು ಪ್ರಕರಣಗಳು ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!