ಹೊಸದಿಗಂತ ಡಿಜಿಟಲ್ ಡೆಸ್ಕ್:
ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಬೆಲವಂತರ ಗ್ರಾಮದ ಬಳಿ ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೊಬ್ಬ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ತುಕಾರಾಂ ಕಮ್ಮಾರ (26) ಬೈಕ್ ಅಪಘಾತದಿಂದ ಸ್ಥಳದಲ್ಲೇ ಮೃತಪಟ್ಟ ವ್ಯಕ್ತಿ. ಲಾರಿಯನ್ನ ಓವರ್ ಟೆಕ್ ಮಾಡಲು ಹೋಗಿ ಇನ್ನೊಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ. ಮತ್ತೋರ್ವ ಬೈಕ್ ಸವಾರ ಮಲ್ಲೇಶ ಹರಿಜನ್ ಗಂಭೀರ ಗಾಯಗೊಂಡಿದ್ದಾರೆ.
ಬೈಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಕುರಿತು ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.