ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಸ್ಟರ್ಡಿ ಅಂತ್ಯವಾದ ಹಿನ್ನೆಲೆಯಲ್ಲಿ ಇಂದ ನಟ ದರ್ಶನ್ ಮತ್ತು ಗ್ಯಾಂಗ್ ಅನ್ನು ಪೊಲೀಸರು ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಿದರು.
ಇದಕ್ಕೂ ಮೊದಲು ನಟ ದರ್ಶನ್ ಮತ್ತು ಗ್ಯಾಂಗ್ ನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗೆ ಎಂದು ಕರೆದುಕೊಂಡು ಹೋಗಲಾಯಿತು. ನಂತರ ನ್ಯಾಯಾಲಯದ ಮುಂದೆ ಆರೋಪಿಗಳನ್ನು ಪೊಲೀಸರು ಹಾಜರುಪಡಿಸಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ ಎಲ್ಲಾ ಆರೋಪಿಗಳಿಗೆ 6 ದಿನ ಪೊಲೀಸ್ ಕಸ್ಟಡಿಗೆ ನೀಡಿ ಈ ಹಿಂದೆ ಕೋರ್ಟ್ ಆದೇಶ ಹೊರಡಿಸಿತು.ಇದೀಗ ಕಸ್ಟಡಿ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಪೊಲೀಸರು ಇದೀಗ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಇನ್ನೇನು ಕೆಲವೇ ಕ್ಷಣಗಳಲ್ಲಿ ತೀರ್ಪು ಹೊರ ಬೀಳಲಿದೆ .