ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅರೆಸ್ಟ್ ಬೆನ್ನಲ್ಲೇ ಹೊಸ ಹೊಸ ವಿಷಯಗಳು ಹೊರಬರುತ್ತಿದ್ದು, ದರ್ಶನ್ ಪವಿತ್ರಾ ಗೌಡ ಮೇಲೆಯೂ ಹಲ್ಲೆ ಮಾಡಿದ್ದರು ಎನ್ನುವ ಸುದ್ದಿ ಹರಿದಾಡುತ್ತಿದೆ.
ಪವಿತ್ರಾಗೆ ಕಿರುಕುಳ ನೀಡಿದರು ಎನ್ನುವ ಕಾರಣಕ್ಕೆ ರೇಣುಕಾಸ್ವಾಮಿಯ ಕೊಲೆ ಆಯಿತು ಎನ್ನಲಾಗಿದೆ, ರೇಣುಕಾಸ್ವಾಮಿ ಕೊಲೆ ಬಳಿಕ ಪವಿತ್ರಾ ಮೇಲೆ ದರ್ಶನ್ ಹಲ್ಲೆ ಮಾಡಿದ್ದಾರೆ ಎನ್ನಲಾಗಿದ್ದು, ನಿನ್ನಿಂದ ಹೀಗೆಲ್ಲಾ ಆಯಿತು ಎಂದು ಕೋಪದಲ್ಲಿ ಹಲ್ಲೆ ಮಾಡಿದ್ದರು ಎನ್ನಲಾಗಿದೆ. ಈ ಕಾರಣದಿಂದಾಗಿ ಗಾಯಗೊಂಡಿದ್ದ ಪವಿತ್ರಾ ಆರ್‌ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು ಎನ್ನಲಾಗಿದೆ.
ಜೂನ್ 10ರಂದು ಪವಿತ್ರಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎನ್ನಲಾಗಿದೆ.