ಚಿತ್ರರಂಗದಿಂದ ದರ್ಶನ್‌ ಬ್ಯಾನ್?: ಕಿಚ್ಚ ಸುದೀಪ್‌ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್‌ ನನ್ನು ಕನ್ನಡ ಚಿತ್ರರಂಗದಿಂದಲೇ ಬ್ಯಾನ್‌ ಮಾಡಬೇಕು ಎಂಬ ಕೂಗು ಕೇಳಿಬರುತ್ತಿದ್ದು, ಈ ಬಗ್ಗೆ ನಟ ಕಿಚ್ಚ ಸುದೀಪ್‌ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬ್ಯಾನ್‌ ಮಾಡಲು ನಾವ್ಯಾರು ಕಾನೂನು ಅಲ್ಲ. ಕೇಸ್‌ನಿಂದ ಹೊರಗೆ ಬಂದ್ರೆ ಬ್ಯಾನ್‌ ಅನ್ನೋದು ಬರೋದೆ ಇಲ್ಲ. ಇಲ್ಲಿ ಬ್ಯಾನ್‌ ಅನ್ನೋದಕ್ಕಿಂತ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಸಿಗಬೇಕು ಅನ್ನೋದು ಮುಖ್ಯ. ಕೆಲ ವಾರಗಳ ಹಿಂದೆಯಷ್ಟೇ ನನ್ನ ಮೇಲೂ ಬ್ಯಾನ್‌ ಎಂಬ ಕೂಗು ಕೇಳಿಬಂದಿತ್ತು. ಹಾಗಾಗಿ ಬ್ಯಾನ್‌ ಮಾಡೋದು ಮುಖ್ಯ ಅಲ್ಲ ನ್ಯಾಯ ಅನ್ನೋದು ಮುಖ್ಯ. ಪೊಲೀಸರು, ಮಾಧ್ಯಮಗಳು ಹೇಗೆ ಕೆಲಸ ಮಾಡ್ತಿವೆ? ಕೋರ್ಟ್‌ನಲ್ಲಿ ಏನಾಗ್ತಿದೆ ಅನ್ನೋದರ ಬಗ್ಗೆ ಎಲ್ಲರೂ ದುರ್ಬೀನು ಹಾಕಿಕೊಂಡು ನೋಡ್ತಿದ್ದಾರೆ. ಗಮನ ಅಲ್ಲಿರಬೇಕು ಅಂತ ಹೇಳಿದ್ದಾರೆ.

ಇಂತಹ ವಿಚಾರದಲ್ಲಿ ಪರ ವಿರೋಧ ಮಾತನಾಡುವುದು ತಪ್ಪಾಗುತ್ತದೆ. ಮುಖ್ಯವಾಗಿ ರೇಣುಕಾಸ್ವಾಮಿ ಕುಟುಂಬಕ್ಕೆ, ಮಗುವಿಗೆ ನ್ಯಾಯ ಸಿಗಬೇಕು. ಬಾಳಿ ಬದುಕಬೇಕಾದ ರೇಣುಕಾಸ್ವಾಮಿ ಅವರಿಗೆ, ಮುಂದೆ ಹುಟ್ಟುವ ಅವರ ಮಗುವಿಗೆ ನ್ಯಾಯ ಸಿಗಬೇಕು. ನ್ಯಾಯದ ಮೇಲೆ ಜನರಿಗೆ ನಂಬಿಕೆ ಬರಬೇಕೆಂದರೆ, ಈ ಪ್ರಕರಣದಲ್ಲಿ ಒಳ್ಳೆ ನ್ಯಾಯ ಸಿಗಬೇಕು ಎಂದು ಸುದೀಪ್‌ ನೊಂದ ಕುಟುಂಬಕ್ಕೆ ದನಿಯಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!