ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮ್ಮ ವಿರುದ್ಧ ಅಶ್ಲೀಲ ಪೋಸ್ಟ್ಗಳನ್ನು ಹಂಚಿಕೊಳ್ಳುತ್ತಿರುವ, ಅಶ್ಲೀಲವಾಗಿ ಕಮೆಂಟ್ ಮಾಡುತ್ತಾ ನಿಂದಿಸುತ್ತಿರುವ ದರ್ಶನ್ ಅಭಿಮಾನಿಗಳ ವಿರುದ್ಧ ನಟಿ ರಮ್ಯಾ ಸಮರ ಸಾರಿದ್ದಾರೆ. ದರ್ಶನ್ ಅಭಿಮಾನಿಗಳ ದುರ್ವರ್ತನೆಯನ್ನು ಸಾಮಾಜಿಕ ಜಾಲತಾಣದ ಮೂಲಕ ಖಂಡಿಸುತ್ತಿದ್ದ ರಮ್ಯಾ ಇದೀಗ ಕಾನೂನು ಮೊರೆ ಹೋಗಿದ್ದು, ಪೊಲೀಸರಿಗೆ ಅಧಿಕೃತವಾಗಿ ದೂರು ದಾಖಲಿಸಿದ್ದಾರೆ.
ಇತ್ತ ಸಾಮಾಜಿಕ ಜಾಲತಾಣಗಳಲ್ಲಿ ನಟಿ ರಮ್ಯಾ ಪರ ವಿರೋಧ ಚರ್ಚೆಗಳು ನಡೆಯುತ್ತಲೇ ಇದೆ. ಈ ಮಧ್ಯೆ ನಟ ಶಿವರಾಜ್‌ಕುಮಾರ್ ಹಾಗೂ ಅವರ ಪತ್ನಿ ರಮ್ಯಾಗೆ ಬೆಂಬಲ ನೀಡುತ್ತೇವೆ ಎಂದು ಹೇಳಿದ್ದಾರೆ.
ಮಹಿಳೆಯರನ್ನು ತಾಯಿಯಾಗಿ, ಅಕ್ಕನಾಗಿ, ಮಗಳಾಗಿ, ಮಡದಿಯಾಗಿ ಮತ್ತು ಮೊಟ್ಟಮೊದಲು ವ್ಯಕ್ತಿಯಾಗಿ ಗೌರವಿಸುವುದು ತುಂಬಾ ಮುಖ್ಯ. ಸೋಷಿಯಲ್ ಮೀಡಿಯಾ ತುಂಬಾ ಬಲಷ್ಠವಾದ ಅಸ್ತ್ರ ಅದನ್ನು ತಮ್ಮ ಏಳಿಗಾಗಿ ಬಳಸಬೇಕೇ ಹೊರತು ಅವಾಚ್ಯ ಶಬ್ದಗಳಿಂದ ನಿಂದಿಸಿ ದ್ವೇಷ-ಅಸೂಯೆಯನ್ನು ಬಿತ್ತಲು ಬಳಸಬಾರದು. ನಿಮ್ಮ ನಿಲವು ಸರಿಯದೆ, ನಿಮ್ಮ ಜೊತೆ ನಾವು ನಿಲ್ಲುತ್ತೇವೆ’ ಎಂದಿದ್ದಾರೆ. ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್ ಇಬ್ಬರೂ ಸಹ ಈ ಸಂದೇಶವನ್ನು ಹಂಚಿಕೊಂಡಿದ್ದು, ಇಬ್ಬರೂ ಸಹ ರಮ್ಯಾ ಪರವಾಗಿ ನಿಂತಿದ್ದಾರೆ.