ಹೊಸದಿಗಂತ ಡಿಜಿಟಲ್ ಡೆಸ್ಕ್:
ದರ್ಶನ್ ಹಾಗೂ ಗ್ಯಾಂಗ್‌ನಿಂದ ಕೊಲೆಯಾಗಿದ್ದಾರೆ ಎನ್ನಲಾದ ಚಿತ್ರದುರ್ಗದ ರೇಣುಕಾಸ್ವಾಮಿ ಕುಟುಂಬಕ್ಕೆ ನಟಿ ರಮ್ಯಾ ಸಾಥ್ ನೀಡಿದ್ದಾರೆ. ರೇಣುಕಾಸ್ವಾಮಿ ಮರ್ಡರ್ ಕೇಸ್ ಸದ್ಯ ಕೋರ್ಟ್‌ನಲ್ಲಿದೆ. ರಮ್ಯಾ ರೇಣುಕಾಸ್ವಾಮಿ ಫ್ಯಾಮಿಲಿ ಬಗ್ಗೆ ಕಾಳಜಿ ವಹಿಸಿದ್ದಾರೆ. ಇದು ದರ್ಶನ್ ಫ್ಯಾನ್ಸ್‌ಗೆ ಹಿಡಿಸಿಲ್ಲ.
ನಟಿ ರಮ್ಯಾಗೆ ಕೆಟ್ಟ, ಅಶ್ಲೀಲ, ಅಸಹ್ಯ ಪದಗಳ ಮೂಲಕ ದರ್ಶನ್ ಫ್ಯಾನ್ಸ್ ನಿಂದಿಸಿದ್ದಾರೆ. ಈ ಕಮೆಂಟ್ಸ್‌ಗಳನ್ನು ರಮ್ಯಾ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ನಂತರ ಕಾನೂನು ಹೋರಾಟಕ್ಕೆ ರಮ್ಯಾ ಮುಂದಾಗಿದ್ದಾರೆ.
ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್ ಹೆಸರು ಕೇಳಿ ಬಂದಾಗ, ಅವತ್ತು ಕೂಡ ರಮ್ಯಾ ಮಾತಾಡಿದ್ದರು. ದರ್ಶನ್‌ರಿಂದ ತಪ್ಪಾಗಿದ್ದರೆ ಕಠಿಣ ಶಿಕ್ಷೆಯೇ ಆಗಬೇಕು ಅಂತ ಪ್ರತಿಕ್ರಿಯೆ ನೀಡಿದ್ದರು. ಜಾಮೀನು ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಪನ್ನು ಕಾಯ್ದಿರಿಸಿದಾಗಲೂ ದರ್ಶನ್ ವಿರುದ್ಧವೇ ಪೋಸ್ಟ್ ಮಾಡಿದ್ದರು. ಹಾಗಾಗಿ ದರ್ಶನ್ ಫ್ಯಾನ್ಸ್ ರಮ್ಯಾ ವಿರುದ್ಧ ತಿರುಗಿ ಬಿದ್ದಿದ್ದರು. ಈಗೀಗ ತೀರಾ ವೈಯಕ್ತಿಕವಾಗಿ ರಮ್ಯಾಗೆ ಟೀಕೆ ಮಾಡುತ್ತಿದ್ದಾರೆ. ಅಶ್ಲೀಲ ಪದಗಳಿಂದ ನಿಂದಿಸುತ್ತಿದ್ದಾರೆ. ಆ ಎಲ್ಲಾ ಸ್ಕ್ರೀನ್‌ಶಾಟ್ ಅನ್ನು ರಮ್ಯಾ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಅಶ್ಲೀಲ ಕಮೆಂಟ್ ಅಕೌಂಟ್‌ಗಳನ್ನು ಬಹಿರಂಗ ಪಡಿಸಿದ ರಮ್ಯಾ, ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. `ರೇಣುಕಾಸ್ವಾಮಿ ಹಾಗೂ ಡಿಬಾಸ್ ಫ್ಯಾನ್ಸ್ ಸಂದೇಶಕ್ಕೂ ಯಾವುದೇ ವ್ಯತ್ಯಾಸವಿಲ್ಲ. ಇವರೆಲ್ಲಾ ಸ್ತ್ರೀದ್ವೇಷ ಮನೋಭಾವದವರು. ಇಂಥವರಿಂದಲೇ ಹೆಣ್ಣು ಮಕ್ಕಳು ದೌರ್ಜನ್ಯ, ಅತ್ಯಾಚಾರಕ್ಕೆ ಒಳಗಾಗುತ್ತಿದ್ದಾರೆ’ ಅಂತ ಡಿ ಬಾಸ್ ಫ್ಯಾನ್ಸ್ ವಿರುದ್ಧ ಮತ್ತೆ ಕಿಡಿಕಾರಿದ್ದಾರೆ ರಮ್ಯಾ. `ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಏಕೆ ಬೇಕು ಎಂಬುದಕ್ಕೆ ನಿಮ್ಮ ಕಾಮೆಂಟ್‌ಗಳು ಸಾಕ್ಷಿ. ನಿಮ್ಮ ಮಸೇಜ್‌ಗಳಿಂದ ನಿಮ್ಮ ಯೋಗ್ಯತೆ ಇಷ್ಟರಲ್ಲೇ ಗೊತ್ತಾಗುತ್ತೆ’ ಎಂದು ತೀಕ್ಷ್ಣವಾಗಿ ತಿವಿದಿದ್ದಾರೆ.