ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜಿಎಸ್ ಆಸ್ಪತ್ರೆಯಲ್ಲಿದ್ದ ನಟ ದರ್ಶನ್ ಅವರು ಈಗ ಕೋರ್ಟ್ಗೆ ತೆರಳುತ್ತಿದ್ದಾರೆ. ಈ ಮೊದಲು ದರ್ಶನ್ ಅವರಿಗೆ ವೈದ್ಯಕೀಯ ಚಿಕಿತ್ಸೆಯ ಹಿನ್ನೆಲೆಯಲ್ಲಿ 6 ವಾರಗಳ ಜಾಮೀನು ಸಿಕ್ಕಿತ್ತು. ಹೈಕೋರ್ಟ್ ವಿಚಾರಣೆಯ ಸಮಯದಲ್ಲಿ ದರ್ಶನ್ ಪರ ವಕೀಲರು ಶಸ್ತ್ರಚಿಕಿತ್ಸೆ ನಡೆಸುವ ಅಗತ್ಯವಿದೆ ಎಂದು ತಿಳಿಸಿದ್ದರು.
ಶುಕ್ರವಾರ ದರ್ಶನ್ ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಈಗ ಜಾಮೀನಿಗೆ ಸಂಬಂಧಿಸಿದಂತೆ ಕೆಲ ಪ್ರಕ್ರಿಯೆಗಳನ್ನು ನಡೆಸಬೇಕಾದ ಕಾರಣ ದರ್ಶನ್ ಕೋರ್ಟ್ನತ್ತ ತೆರಳುತ್ತಿದ್ದಾರೆ.