ಹೊಸದಿಗಂತ ಡಿಜಿಟಲ್ ಡೆಸ್ಕ್ :
ಕೊಲೆ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ದರ್ಶನ್ ಬಿಡುಗಡೆಗಾಗಿ ತೂಗುದೀಪ್ ಫ್ಯಾಮಿಲಿ ಈಗ ದೇವರ ಮೊರೆ ಹೋಗಿದ್ದಾರೆ. ದಿನಕರ್ ತೂಗುದೀಪ್ ದಂಪತಿ ಜೊತೆ ನಟ ಚಿಕ್ಕಣ್ಣ ಚಾಮುಂಡಿ ತಾಯಿಯ ದರ್ಶನ ಪಡೆದಿದ್ದಾರೆ.
ಮೈಸೂರಿನಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನಕ್ಕೆ ದರ್ಶನ್ ಸಹೋದರ ದಿನಕರ್ ತೂಗುದೀಪ್ ಕುಟುಂಬದ ಜೊತೆ ಚಿಕ್ಕಣ್ಣ ಕೂಡ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಣ್ಣನನ್ನು ಸಂಕಷ್ಟದಿಂದ ಪಾರು ಮಾಡುವಂತೆ ಪ್ರಾರ್ಥನೆ ಮಾಡಿದ್ದಾರೆ.