ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ದರ್ಶನ್ ಮತ್ತು ಪವಿತ್ರ ಗೌಡ ಇಂದು ಬೆಂಗಳೂರಿನ ಸೆಷನ್ಸ್ ನ್ಯಾಯಾಲಯಕ್ಕೆ ಹಾಜರಾಗಲಿದ್ದು, ಅಲ್ಲಿ ಅವರು ಪರಸ್ಪರ ಮುಖಾಮುಖಿಯಾಗಲಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆರೋಪಿಗಳ ಹಾಜರಾತಿಗೆ ಸೂಚನೆ ನೀಡಲಾಗಿದ್ದು, ಸಿಸಿಎಚ್ 57 ನ್ಯಾಯಾಲಯದಲ್ಲಿ ನಟ ದರ್ಶನ್ ಮತ್ತು ಪವಿತ್ರಾ ಗೌಡ ಮುಖಾಮುಖಿಯಾಗಲಿದ್ದಾರೆ.
ಜಾಮೀನು ನೀಡುವ ಸಂದರ್ಭದಲ್ಲಿ ನ್ಯಾಯಾಲಯವು ಎಲ್ಲಾ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದ್ದು, ಎಲ್ಲಾ ಆರೋಪಿಗಳು ಇಂದು ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಸೇರಿದಂತೆ 7 ಮಂದಿಗೆ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನು ರದ್ದುಗೊಳಿಸುವಂತೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ.