ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಳ್ಳಾರಿ ಜೈಲಿನಲ್ಲಿ ಇರುವ ದರ್ಶನ್ ಅವರು ಕುಟುಂಬದವರ ಭೇಟಿಗೆ ಮನವಿ ಮಾಡಿದ್ದಾರೆ. ಮುಂದಿನ ಕಾನೂನು ಪ್ರಕ್ರಿಯೆಗಳ ಬಗ್ಗೆ ಫ್ಯಾಮಿಲಿ ಜೊತೆ ಮಾತನಾಡಲು ಅವರು ಬಯಸಿದ್ದಾರೆ.
ಬಳ್ಳಾರಿ ಜೈಲಿನಲ್ಲಿ ಇರುವ ದರ್ಶನ್ ಅವರು ಪ್ರಿಸನ್ ಕಾಲ್ ಸಿಸ್ಟಮ್ ಮೂಲಕ ಕುಟುಂಬದವರಿಗೆ ದೂರವಾಣಿ ಕರೆ ಮಾಡಿದ್ದಾರೆ. ಪತ್ನಿ ವಿಜಯಲಕ್ಷ್ಮಿ ಜೊತೆ ಅವರು 5 ನಿಮಿಷಗಳ ಕಾಲ ಮಾತನಾಡಿದ್ದಾರೆ. ಮುಂದಿನ ಕಾನೂನು ಹೋರಾಟದ ಬಗ್ಗೆಯೇ ಪತ್ನಿ ಜೊತೆ ಅವರು ಚರ್ಚೆ ಮಾಡಿದ್ದಾರೆ. ಪತ್ನಿ ಜೊತೆ ಮಾತನಾಡುವಾಗ ಅವರು ಭಾವುಕರಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಮುಗಿದಿದೆ. 3991 ಪುಟಗಳು ಇರುವ ಜಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ. ಆರೋಪಗಳು ಗಂಭೀರ ಆಗಿರುವುದರಿಂದ ದರ್ಶನ್ಗೆ ಜಾಮೀನು ಸಿಗುವುದು ಕಷ್ಟ ಇದೆ. ಮುಂದಿನ ಕಾನೂನು ಹೋರಾಟದ ಬಗ್ಗೆ ಕೇವಲ 5 ನಿಮಿಷ ಫೋನ್ ಕಾಲ್ನಲ್ಲಿ ಮಾತನಾಡಲು ದರ್ಶನ್ಗೆ ಸಾಧ್ಯವಾಗಿಲ್ಲ. ಆದ್ದರಿಂದ ಪತ್ನಿ ಮತ್ತು ತಾಯಿ ಜೊತೆ ನೇರವಾಗಿ ಮಾತನಾಡಲು ಅವರು ತೀರ್ಮಾನಿಸಿದ್ದಾರೆ.