ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಸಹಚರರು ಜೈಲು ಸೇರಿದ್ದು, ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ.
ಇತ್ತ ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಿರುವ ಅಂಶಗಳನ್ನು ಪ್ರಸಾರ ಮಾಡದಂತೆ ಮತ್ತು ಮುದ್ರಿಸದಂತೆ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದ ಬೆನ್ನಲ್ಲೇ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಕರೆ ಮಾಡಿ ಮಾತನಾಡಿದ್ದು, ಸೆಕ್ಯುರಿಟಿ ಸೆಲ್‌ನಲ್ಲೇ ಪತ್ನಿಯೊಂದಿಗೆ ಮಾತುಕತೆ ನಡೆಸಿದ್ದಾರೆ.
ದರ್ಶನ್ ಸೇರಿದಂತೆ ನಾಲ್ವರು ಖೈದಿಗಳಿಗೆ ಈ ವ್ಯವಸ್ಥೆ ಮಾಡಲಾಗಿದ್ದು, ಭದ್ರತೆ ದೃಷ್ಟಿಯಿಂದ ಹೈ ಸೆಕ್ಯುರಿಟಿ ಕಾಲ್ ವ್ಯವಸ್ಥೆ ಮಾಡಲಾಗಿದೆ.
ಪ್ರಿಸನ್ ಕಾಲ್ ಸಿಸ್ಟಮ್ನಲ್ಲಿ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರ ನಂಬರ್ಅನ್ನು ಸೇವ್ ಮಾಡಲಾಗಿದ್ದು, ಐದು ನಿಮಿಷಗಳ ಕಾಲ ಪತ್ನಿಯೊಂದಿಗೆ ದರ್ಶನ್ ಮಾತುಕತೆ ನಡೆಸಿದ್ದಾರೆ.
ಇಂದಿನ ಬೆಳವಣಿಗೆ ಸೇರಿದಂತೆ ಹಲವು ವಿಚಾರಗಳ ಕುರಿತು ಸಿಕ್ಕ ಸಮಯದಲ್ಲಿ ದರ್ಶನ್ ಮಾತನಾಡಿದ್ದು, ಪತ್ನಿ ಜೊತೆ ಮಾತನಾಡುವಾಗ ಭಾವುಕರಾಗಿದ್ದಾರೆ.
ನಾಳೆಯೇ ಜೈಲಿಗೆ ಬರುವಂತೆ ಪತ್ನಿಗೆ ತಿಳಿಸಿದ ದರ್ಶನ್ ಜೊತೆಗೆ ತಾಯಿ ಮೀನಾರನ್ನು ಕರೆದುಕೊಂಡು ಬರುವಂತೆ ಹೇಳಿದ್ದಾರೆ. . ಈ ಬಗ್ಗೆ ಕುಟುಂಬಸ್ಥರು ಮಾಹಿತಿ ಅಧಿಕಾರಿಗಳಿಗೆ ನೀಡಿದ್ದು ನಾಳೆ (ಸೆಪ್ಟೆಂಬರ್ 10) ಸಂಜೆ 4 ಗಂಟೆ ಸುಮಾರಿಗೆ ಜೈಲಿಗೆ ಭೇಟಿ ನೀಡುವುದಾಗಿ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.