ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪ ಎದುರಿಸುತ್ತಿರುವ ನಟ ದರ್ಶನ್ ಅವರು ಕೃಷಿ ಇಲಾಖೆಯ ರಾಯಭಾರಿಯಾಗಿಯಾಗಿ ಮುಂದುವರಿಯುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.
ಹತ್ಯೆ ಪ್ರಕರಣ ಪಾರದರ್ಶಕವಾಗಿ ತನಿಖೆ ನಡೆಸಲಾಗುತ್ತಿದೆ. ದರ್ಶನ್ಗೆ ರಾಜಮರ್ಯಾದೆಯ ಪ್ರಶ್ನೆಯೇ ಇಲ್ಲ. ಆರೋಪ ಸಾಬೀತಾದರೆ ಅವರಿಗೆ ಶಿಕ್ಷೆ ಆಗುತ್ತದೆ. ಗಂಭೀರ ಆರೋಪ ಎದುರಿಸುತ್ತಿರುವಾಗ ಅವರು ಕೃಷಿ ಇಲಾಖೆಯ ರಾಯಭಾರಿಯಾಗಿ ಮುಂದುವರಿಯಲು ಸಾಧ್ಯವಿಲ್ಲ ಎಂದಿದ್ದಾರೆ.