ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಮರ್ಡರ್ ಕೇಸ್‌ನಲ್ಲಿ ನಟ ದರ್ಶನ್ ಜೈಲು ಸೇರಿ ಮೂರು ತಿಂಗಳಾಗಿದೆ. ಇಂದಿಗೆ ದರ್ಶನ್ ನ್ಯಾಯಾಂಗ ಬಂಧನದ ಅವಧಿ ಪೂರ್ಣಗೊಳ್ಳುತ್ತಿತ್ತು. ಹೀಗಾಗಿ, ದರ್ಶನ್ ಹಾಗೂ ಗ್ಯಾಂಗ್ನ ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ಎದುರು ಹಾಜರುಪಡಿಸಲಾಗಿದೆ. ಅವರ ನ್ಯಾಯಾಂಗ ಬಂಧನದ ಅವಧಿ ಸೆಪ್ಟೆಂಬರ್ 30ರವರೆಗೆ ವಿಸ್ತರಣೆ ಆಗಿದೆ.
ಕುರ್ಚಿ ಬಗ್ಗೆ ಮತ್ತೊಮ್ಮೆ ಜಡ್ಜ್ ಎದುರು ದರ್ಶನ್ ಪರ ವಕೀಲರು ಮನವಿ ಮಾಡಿದ್ದಾರೆ. ಪ್ಲಾಸ್ಟಿಕ್ ಚೇರ್ ವ್ಯವಸ್ಥೆ ಮಾಡೋಕು ಜೈಲಾಧಿಕಾರಿಗಳು ಆಗಲ್ಲ ಎಂದು ಹೇಳುತ್ತಿದ್ದಾರೆ. ಬೇರೆ ಕೈದಿಗಳಿಗೆ ಆ ವ್ಯವಸ್ಥೆ ಇದೆ. ಆದರೆ, ದರ್ಶನ್ಗೆ ಚೇರ್ ವ್ಯವಸ್ಥೆ ಮಾಡುತ್ತಿಲ್ಲ. ದರ್ಶನ್ ಅವರನ್ನು ಯಾರು ಏನು ಅಂದುಕೊಂಡಿದ್ದಾರೋ ಗೊತ್ತಿಲ್ಲ ಎಂದು ದರ್ಶನ್ ಪರ ವಕೀಲರು ಹೇಳಿದರು. ಕೈದಿಗಳಿಗೆ ಏನು ವ್ಯವಸ್ಥೆ ನೀಡಬೇಕು ಎಂದು ಜೈಲಿನ ನಿಯಮ ಪಟ್ಟಿಯಲ್ಲಿ ಇದೆ. ಅದು ಕೊಡಬೇಕು ಎಂದು ಆದೇಶ ಮಾಡುತ್ತೇನೆ ಎಂದು ಜಡ್ಜ್ ಹೇಳಿದರು.