ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಕೊನೆಗೂ ದರ್ಶನ್ ಪರ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ.
ಇಂದು ಸೆಷನ್ ಕೋರ್ಟಿಗೆ ಅರ್ಜಿ ಸಲ್ಲಿಸಲಾಗಿತ್ತು. ತುರ್ತು ವಿಚಾರಣೆಗಾಗಿ ಮನವಿ ಮಾಡಿಕೊಳ್ಳಲಾಗಿತ್ತು. ಆದ್ರೆ ಎಸ್.ಪಿಪಿಗೆ ನೋಟಿಸ್ ಜಾರಿ ಮಾಡಿ ಸೋಮವಾರಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಲಾಯಿತು.
ಈಗಾಗಲೇ ಪವಿತ್ರಾ ಗೌಡ ಕೂಡ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಅದು ಇನ್ನೂ ವಿಚಾರಣೆ ಆಗಬೇಕಿದೆ. ಈ ಬೆನ್ನಲ್ಲೇ ದರ್ಶನ್ ಕೂಡ ಅರ್ಜಿ ಸಲ್ಲಿಸಿದ್ದಾರೆ. ಸೋಮವಾರ ಅರ್ಜಿ ವಿಚಾರಣೆ ಇದೆ.