Monday, November 24, 2025

ದರ್ಶನ್‌ ಸಿನಿಮಾ ಗೆಲ್ಲಬೇಕು, ಎಲ್ಲ ಒಳ್ಳೆದಾಗಬೇಕು: ಸುಮಲತಾ ವಿಶಸ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾದ ಬಿಡುಗಡೆ ದಿನಾಂಕ ಹತ್ತಿರ ಆಗಿದೆ. ಡಿಸೆಂಬರ್ 11ರಂದು ಈ ಸಿನಿಮಾ ತೆರೆ ಕಾಣಲಿದೆ. ಸದ್ಯಕ್ಕೆ ದರ್ಶನ್ ಕೊಲೆ ಆರೋಪಿಯಾಗಿ ಜೈಲುವಾಸ ಅನುಭವಿಸುತ್ತಿದ್ದಾರೆ.

ಅವರ ಅನುಪಸ್ಥಿತಿಯಲ್ಲೇ ‘ದಿ ಡೆವಿಲ್’ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ಮುಂದಾಗಿದೆ. ಹಲವು ಕಡೆಗಳಿಗೆ ತೆರಳಿ ಪ್ರಚಾರ ಮಾಡಲಾಗುತ್ತಿದೆ. ಈ ಸಮಯದಲ್ಲಿ ದರ್ಶನ್ ಲಭ್ಯವಿದ್ದಿದ್ದರೆ ಅದ್ದೂರಿಯಾಗಿ ಪ್ರಚಾರ ಮಾಡಲಾಗುತ್ತಿತ್ತು. ಆದರೆ ಅವರು ಇಲ್ಲದ ಕಾರಣ ಪ್ರಚಾರಕ್ಕೆ ಕೊಂಚ ಹಿನ್ನಡೆ ಆಗಿರಬಹುದಾ ಎಂಬ ಪ್ರಶ್ನೆಗೆ ಸುಮಲತಾ ಅಂಬರೀಶ್ ಅವರು ಉತ್ತರಿಸಿದ್ದಾರೆ.

ಆಗಿ ಹೋಗಿರುವ ವಿಷಯದ ಬಗ್ಗೆ ಮಾತನಾಡಿದರೆ ಈಗ ಏನೂ ಪ್ರಯೋಜನ ಇಲ್ಲ. ಮುಂದೆ ಒಳ್ಳೆಯದಾಗಲಿ ಅಂತ ಹಾರೈಸೋಣ. ಡೆವಿಲ್ ಸಿನಿಮಾ ತಂಡದವರು ಪ್ರಚಾರ ಸರಿಯಾಗಿಯೇ ಮಾಡುತ್ತಿದ್ದಾರೆ ಎನಿಸುತ್ತದೆ. ಯಾವತ್ತೂ ನಾನು ಸಿನಿಮಾ ಪ್ರಚಾರಕ್ಕೆ ನೇರವಾಗಿ ಪಾಲ್ಗೊಂಡಿರಲ್ಲ. ನಾನು ದರ್ಶನ್ ಅವರ ಹಿತೈಶಿ. ಆ ಸಿನಿಮಾ ಖಂಡಿತವಾಗಿಯೂ ಯಶಸ್ವಿ ಆಗಬೇಕು ಎಂಬುದು ನನ್ನ ಹಾರೈಕೆ ಎಂದು ಸುಮಲತಾ ಅಂಬರೀಷ್ ಅವರು ಹೇಳಿದ್ದಾರೆ.

error: Content is protected !!