ಹೊಸದಿಗಂತ ಡಿಜಿಟಲ್ ಡೆಸ್ಕ್:
‘ದಿ ಡೆವಿಲ್’ ಸಿನಿಮಾದಿಂದ ಹೊಸ ಹಾಡು ಬಿಡುಗಡೆ ಆಗಲಿದೆ ಎಂದು ಡಿ ಫ್ಯಾನ್ಸ್ ಕಾದು ಕುಳಿತ್ತಿದ್ದರು. ಆದರೆ ಹಾಡಿನ ಬಿಡುಗಡೆಗೆ ಒಂದು ದಿನ ಬಾಕಿ ಇರುವಾಗಲೇ ದರ್ಶನ್ ಅವರ ಪಾಲಿನ ನೆಮ್ಮದಿ ಮಾಯವಾಗಿದೆ. ಹೈಕೋರ್ಟ್ ನೀಡಿದ್ದ ಜಾಮೀನನ್ನು ಇಂದು ಸುಪ್ರೀಂ ಕೋರ್ಟ್ ರದ್ದು ಮಾಡಿದೆ. ಆ ಕಾರಣದಿಂದ ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡಿನ ಬಿಡುಗಡೆಯನ್ನು ಮುಂದೂಡಲಾಗಿದೆ.
‘ಮಿಲನ’ ಖ್ಯಾತಿಯ ಪ್ರಕಾಶ್ ವೀರ್ ಅವರು ‘ದಿ ಡೆವಿಲ್’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ‘ಶ್ರೀ ಜೈಮಾತಾ ಕಂಬೈನ್ಸ್’ ಸಂಸ್ಥೆಯ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಆಗಸ್ಟ್ 15ರಂದು ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ ಆಗಲಿದೆ ಎಂದು ಕೆಲವೇ ದಿನಗಳ ಹಿಂದಷ್ಟೇ ತಿಳಿಸಲಾಗಿತ್ತು. ಆದರೆ ಈಗ ಹಾಡು ಬಿಡುಗಡೆ ಮುಂದಕ್ಕೆ ಹೋಗಿದೆ ಎಂಬುದನ್ನು ಚಿತ್ರತಂಡವೇ ಅಧಿಕೃತವಾಗಿ ಘೋಷಿಸಿದೆ.
‘ನಾಳೆ ಬೆಳಗ್ಗೆ ಬಿಡುಗಡೆ ಆಗಬೇಕಿದ್ದ ದಿ ಡೆವಿಲ್ ಸಿನಿಮಾದ ಹಾಡನ್ನು ಅನಿವಾರ್ಯ ಕಾರಣದಿಂದ ಮುಂದೂಡಲಾಗಿದೆ’ ಎಂದು ‘ಶ್ರೀ ಜೈಮಾತಾ ಕಂಬೈನ್ಸ್’ ಸಂಸ್ಥೆಯ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಾಹಿತಿ ನೀಡಲಾಗಿದೆ.
View this post on Instagram