ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜೈಲು ಸೇರಿದ್ದಾರೆ.
ದರ್ಶನ್ ನಿರಪರಾಧಿ ಎಂದು ಸಾಬೀತಾಗಿ ಜೈಲಿನಿಂದ ಹೊರಬರಲಿ ಎಂದು ಪತ್ನಿ ವಿಜಯಲಕ್ಷ್ಮಿ ದೇವಸ್ಥಾನಗಳನ್ನು ಸುತ್ತುತ್ತಿದ್ದಾರೆ. 45 ದಿನಗಳಿಂದ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ (Darshan) ನೋಡಲು ಬನಶಂಕರಿ ದೇವಿ ಪ್ರಸಾದದೊಂದಿಗೆ ಪತ್ನಿ ವಿಜಯಲಕ್ಷ್ಮಿ ಆಗಮಿಸಿದ್ದಾರೆ
ನಿನ್ನೆ ಭೀಮನ ಅಮವಾಸ್ಯೆ ನಿಮಿತ್ತ ಶಕ್ತಿ ದೇವತೆ ಬನಶಂಕರಿ ದೇವಸ್ಥಾನದಲ್ಲಿ ಸಂಕಲ್ಪ ಪೂಜೆ ಮಾಡಿಸಿದ್ದರು. ಈ ಹಿನ್ನೆಲೆ ದೇವಿ ಪ್ರಸಾದ ಹಿಡಿದು ದಿನಕರ್ ತೂಗುದೀಪ್ ಜೊತೆ ಮತ್ತೆ ವಿಜಯಲಕ್ಷ್ಮಿ ಜೈಲಿಗೆ ಭೇಟಿ ಕೊಟ್ಟಿದ್ದಾರೆ.