ಇನ್​ಸ್ಟಾಗ್ರಾಮ್‌ ನಲ್ಲಿ ಮತ್ತೆ ಆಕ್ಟಿವ್ ಯಾದ ದರ್ಶನ್‌ ಪತ್ನಿ ವಿಜಯಲಕ್ಷ್ಮಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್‌ ಜೈಲು ಸೇರಿದ್ದು, ಇತ್ತ ಪತ್ನಿ ವಿಜಯಲಕ್ಷ್ಮಿ ಅವರು ತಮ್ಮ ಇನ್ಸ್ಟಾ ಖಾತೆಯನ್ನು ಡಿಲಿಟ್‌ ಮಾಡಿದ್ದರು. ಈಗ ಮತ್ತೆ ತಮ್ಮ ಇನ್​ಸ್ಟಾಗ್ರಾಂ ಖಾತೆಯನ್ನು ಸಕ್ರಿಯಗೊಳಿಸಿದ್ದಾರೆ.

ವಿಜಯಲಕ್ಷ್ಮಿ ಹಳೆಯ ಖಾತೆಯನ್ನೇ ಮುಂದುವರಿಸಿದ್ದಾರೆ. ಎಲ್ಲ ಪೋಸ್ಟ್​ಗಳನ್ನು ಡಿಲೀಟ್ ಮಾಡಿದ್ದಾರೆ. ಫಾಲೋ ಮಾಡುತ್ತಿದ್ದವರನ್ನು ಸಹ ಅನ್​ಫಾಲೋ ಮಾಡಿದ್ದಾರೆ.ಖಾತೆ ಹೆಸರು ‘ವಿಜಿ ದರ್ಶನ್’ ಎಂದೇ ಇದೆ. ಬಯೋನಲ್ಲಿ ವಿಜಯಲಕ್ಷ್ಮಿ ದರ್ಶನ್ ಎಂದಿದೆ. ಆದರೆ ಪ್ರೊಫೈಲ್ ಚಿತ್ರ, ಮಾಡಲಾಗಿದ್ದ ಪೋಸ್ಟ್​ಗಳೆಲ್ಲವನ್ನೂ ಸಹ ವಿಜಯಲಕ್ಷ್ಮಿ ಡಿಲೀಟ್ ಮಾಡಿದ್ದಾರೆ.

Vijayalakshmi Darshan Reactivated Instagram Accountಜೊತೆಗೆ ವಿಜಯಲಕ್ಷ್ಮಿ ಅವರೇ ದರ್ಶನ್‌ ಪರ ವಕೀಲ ಅನಿಲ್ ಬಾಬು ಅವರನ್ನು ನೇಮಿಸಿದ್ದಾರೆ.

ವಕೀಲ ಅನಿಲ್ ಬಾಬು ಮಾಧ್ಯಮದವರ ಮುಂದೆ ಮಾತನಾಡಿ, ದರ್ಶನ್ ಪತ್ನಿಗೆ ಬೇಜಾರು ಆಗಿದ್ದು, ಪವಿತ್ರಾ ಗೌಡ ಅವರು ದರ್ಶನ್‌ ಹೆಂಡತಿ ಎಂದು ಎಲ್ಲ ಮೀಡಿಯಾಗಳು ತೋರಿಸಿದ್ದರು. ದರ್ಶನ್‌ ಅವರಿಗೆ ಇರವ ಏಕೈಕ ಪತ್ನಿ ಎಂದರೆ ಅದು ವಿಜಯಲಕ್ಷ್ಮಿ. ದಂಪತಿಗೆ ವಿನೀಶ್‌ ಎಂಬ ಪುತ್ರನಿದ್ದಾನೆ. ಮಾಧ್ಯಮಗಳು ಪವಿತ್ರಾ ಅವರನ್ನು ದರ್ಶನ್​ರ ಪತ್ನಿ ಎಂದು ಸಂಭೋದಿಸಬಾರದು’ ಎಂದಿದ್ದರು. ವಿಜಯಲಕ್ಷ್ಮಿ ಅವರು ಮಾನಸಿಕವಾಗಿ ಜರ್ಜರಿತವಾಗಿದ್ದಾರೆ. ಸದ್ಯಕ್ಕೆ ಅವರಿಗೆ ಸಮಯದ ಅಗತ್ಯವಿದೆ. ಆದಷ್ಟು ಬೇಗ ಅವರು ಎಲ್ಲರ ಮುಂದೆ ಬರಲಿದ್ದಾರೆ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!