ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ತಮ್ಮ ಆಪ್ತರ ಜೊತೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ರಾತ್ರಿ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಿ ಕೊಲ್ಲೂರಿಗೆ ಆಗಮಿಸಿ ದೇವಿಯ ದರ್ಶನ ಪಡೆದಿದ್ದಾರೆ.
ದೇವಸ್ಥಾನದಲ್ಲಿ ದರ್ಶನ್ ಬಿಡುಗಡೆಗೆ ಸಂಬಂಧಿಸಿದಂತೆ ಇಂದು ಬೆಳಗ್ಗೆ ನವ ಚಂಡಿಕಾ ಹೋಮ ನಡೆಯಲಿದೆ. ಮುಂಜಾನೆ ಯಾಗಶಾಲೆಯಲ್ಲಿ ಚಂಡಿಕಾ ಹೋಮ ನಡೆಯಲಿದ್ದು, ದರ್ಶನ್ ಬಿಡುಗಡೆಗಾಗಿ ವಿಜಯಲಕ್ಷ್ಮಿ ದೇವರ ಬಳಿ ಪ್ರಾರ್ಥನೆ ಮಾಡಲಿದ್ದಾರೆ.