ಹೊಸದಿಗಂತ ಡಿಜಿಟಲ್ ಡೆಸ್ಕ್:
ಲಿಟನ್ ದಾಸ್ ಹಾಗೂ ತಾನ್ಜಿದ್ ಹಸನ್ ಆಕರ್ಷಕ ಅರ್ಧಶತಕ ನೆರವಿನಿಂದ ಬಾಂಗ್ಲಾದೇಶ ತಂಡವು ನಿಗದಿತ 50 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 256 ರನ್ ಬಾರಿಸಿದ್ದು, ಟೀಂ ಇಂಡಿಯಾಗೆ ಸ್ಪರ್ಧಾತ್ಮಕ ಗುರಿ ನೀಡಿದೆ.
ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆಯ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ತಂಡದ ನಾಯಕ ನಜ್ಮುಲ್ ಹೊಸೈನ್ ಶಾಂಟೋ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಮೊದಲ ವಿಕೆಟ್‌ಗೆ ತಾನ್ಜಿದ್ ಹಸನ್ ಹಾಗೂ ಲಿಟನ್ ದಾಸ್ ಜೋಡಿ 93 ರನ್‌ಗಳ ಜತೆಯಾಟವಾಡುವ ಮೂಲಕ ಬಾಂಗ್ಲಾದೇಶ ತಂಡಕ್ಕೆ ಭರ್ಜರಿ ಆರಂಭ ಒದಗಿಸಿಕೊಟ್ಟರು.
ನಾಯಕ ನಜ್ಮುಲ್ ಹೊಸೈನ್ ಶಾಂಟೋ(8) ಹಾಗೂ ಮೆಹದಿ ಹಸನ್ ಮಿರಾಜ್(3) ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಹಾದಿ ಹಿಡಿದರು. ಒಂದು ಕಡೆ ವಿಕೆಟ್ ಉರುಳುತ್ತಿದ್ದರೂ ಮತ್ತೊಂದೆಡೆ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದ ಲಿಟನ್ ದಾಸ್ 82 ಎಸೆತಗಳನ್ನು ಎದುರಿಸಿ 7 ಬೌಂಡರಿ ಸಹಿತ ಆಕರ್ಷಕ 66 ರನ್ ಬಾರಿಸಿ ರವೀಂದ್ರ ಜಡೇಜಾಗೆ ಎರಡನೇ ಬಲಿಯಾದರು.
ತೌಹಿದ್ ಹೃದಯ್(16), ಮುಷ್ಫಿಕುರ್ ರಹೀಂ(38), ಮೊಹಮದುಲ್ಲಾ(46) ಜವಾಬ್ದಾರಿಯುತ ಬ್ಯಾಟಿಂಗ್ ನಡೆಸುವ ಮೂಲಕ ತಂಡದ ಮೊತ್ತವನ್ನು 250ರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು.