ನಾಮಪತ್ರ ಸಲ್ಲಿಕೆಗೆ ಚುನಾವಣಾ ಆಯೋಗ ನೀಡಿದ್ದ ಸಮಯ ಮುಕ್ತಾಯ: ನಾಳೆ ನಾಮಪತ್ರ ಪರಿಶೀಲನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ಕರ್ನಾಟಕ ವಿಧಾಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಅವಧಿ ಮುಕ್ತಾಯಗೊಂಡಿದೆ.

ಮೇ 10ರಂದು ನಡೆಯುವ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆಗಳಿಗೆ ನಾಮಪತ್ರ ಸಲ್ಲಿಕೆ ಮಾಡಲು ಚುನಾವಣಾ ಆಯೋಗ ನೀಡಿದ್ದ ಸಮಯ ಅಂತ್ಯಗೊಂಡಿದೆ. ಸದ್ಯ ಚುನಾವಣಾಧಿಕಾರಿ ಕಚೇರಿಯೊಳಗಿರುವವರಿಗೆ ಮಾತ್ರ ನಾಮಪತ್ರ ಸಲ್ಲಿಸಲು ಅವಕಾಶ ನೀಡಿದ್ದಾರೆ.

ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು. ಇದೀಗ ಆ ಸಮಯವು ಮುಗಿದಿದೆ. ನಾಳೆ ಚುನಾವಣಾಧಿಕಾರಿಗಳು ನಾಮಪತ್ರ ಪರಿಶೀಲನೆ ಮಾಡಲಿದ್ದಾರೆ.

ಏಪ್ರಿಲ್ 24ರಂದು ನಾಮಪತ್ರ ಹಿಂಪಡೆಯಲು ಕೊನೆ ದಿನವಾಗಿರುತ್ತದೆ. ಮೇ 10ರಂದು 224 ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 13ರ ಶನಿವಾರದಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!