ಪಂಚರಾಜ್ಯ ಚುನಾವಣೆಗೆ ದಿನಾಂಕ ಫಿಕ್ಸ್: ಫೆ.10-ಮಾ.7 ರವರೆಗೆ ಚುನಾವಣೆ, ಮಾ.10 ರಂದು ಫಲಿತಾಂಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗೋವಾ, ಪಂಜಾಬ್, ಮಣಿಪುರ, ಉತ್ತರಾಖಂಡ ಮತ್ತು ಉತ್ತರ ಪ್ರದೇಶದಲ್ಲಿ ನಡೆಯಲಿರುವ ಮುಂಬರುವ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಶನಿವಾರಭಾರತದ ಚುನಾವಣಾ ಆಯೋಗ ಪ್ರಕಟಿಸಿದೆ.

ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದಂತ ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ, ಪಂಜಾಬ್, ಮಣಿಪುರ, ಉತ್ತರಾಖಂಡ ಮತ್ತು ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯನ್ನು 7 ಹಂತಗಳಲ್ಲಿ ನೆಡಸಲು ಚುನಾವಣಾ ಆಯೋಗ ನಿರ್ಧರಿಸಿದೆ.ಅಂತಿಮವಾಗಿ ಫಲಿತಾಂಶವನ್ನು ಮಾರ್ಚ್ 10, 2022ರಂದು ಪ್ರಕಟಿಸಲು ನಿರ್ಧರಿಸಿದೆ. 5 ರಾಜ್ಯಗಳ ಚುನಾವಣಾ ನೀತಿಸಂಹಿತೆ ಇಂದಿನಿಂದಲೇ ಜಾರಿ ಆಗಲಿದೆ.

ಚುನಾವಣೆಯಲ್ಲಿ ಒಟ್ಟು 18.34 ಕೋಟಿ ಮತದಾರರು ಮತದಾನ ಮಾಡಲಿದ್ದಾರೆ. 24.9 ಲಕ್ಷ ಜನರು ಮೊದಲ ಬಾರಿ ಮತ ಚಲಾಯಿಸ್ತಿದ್ದಾರೆ.

ಕೊರೋನಾ ಮಾರ್ಗಸೂಚಿ ಪಾಲಿಸಿ ಚುನಾವಣೆ ನಡೆಸಲ್ಗುವುದು. ಮತಗಟ್ಟೆಗಳನ್ನು ಗ್ರೌಂಡ್ ಫ್ಲೋರ್‌ನಲ್ಲಿ ಸ್ಥಾಪಿಸಲಾಗುತ್ತದೆ.ಕೊರೋನಾ ಸೋಂಕಿತರಿಗೂ ಮತ ಚಲಾವಣೆಗೆ ಅವಕಾಶ ನೀಡಲಾಗಿದೆ. ಪೋಸ್ಟ್ ಬ್ಯಾಲೆಡ್ ವ್ಯವಸ್ಥಾ ಮಾಡಲಾಗಿದೆ. ಪ್ರತಿ ಬೂತ್ ಬಳಿಯಲ್ಲಿ ಥರ್ಮಲ್ ಸ್ಕ್ಯಾನಿಂಗ್ ವ್ಯವಸ್ಥೆ ಮಾಡಲಾಗಿದೆ. ಸ್ಯಾನಿಟೈಸರ್ ಮಾಡಲಾಗುತ್ತಿದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಮತದಾರರು ಮತದಾನ ಮಾಡುವಂತೆ ಮನವಿ ಮಾಡಿದರು.

ಇನ್ನು 80 ವರ್ಷ ಮೇಲ್ಪಟ್ಟ, ವಿಶೇಷ ಚೇತನರು ವೋಟ್ ಮಾಡಲು ವ್ಹೀಲ್​ ಚೇರ್​ ವ್ಯವಸ್ಥೆ ಮಾಡಲಾಗುವುದು. ಐದು ವಿಧಾನಸಭಾ ಚುನಾವಣೆಯ ಶೇ.60ರಷ್ಟು ಬೂತ್ ಗಳ ಮತದಾನದ ವಿವರಗಳನ್ನು ವೆಬ್ ಕಾಸ್ಟ್ ಮಾಡಲಾಗುತ್ತಿದ್ದೇವೆ. ಕ್ರಿಮಿನಲ್ ಹಿನ್ನಲೆಯುಳ್ಳ ಅಭ್ಯರ್ಥಿಯನ್ನು ಫಿಲ್ಟರ್ ಮಾಡಲಾಗುತ್ತಿದೆ. 2.15 ಲಕ್ಷ ಮತಗಟ್ಟೆಗಳನ್ನು ಈ ಬಾರಿ ಚುನಾವಣೆಗಾಗಿ ಸ್ಥಾಫಿಸಲಾಗಿದೆ. ವಿವಿ ಪ್ಯಾಡ್, ಇವಿಎಂಗಳ ಮೂಲಕ ಚುನಾವಣೆ ನಡೆಸಲಾಗುತ್ತಿದೆ ಎಂದರು.

ಚುನಾವಣಾ ಕರ್ತವ್ಯಕ್ಕೆ ಎರಡು ಡೋಸ್ ಲಸಿಕೆ ಪಡೆದ ನೌಕರರನ್ನು ಮಾತ್ರವೇ ನೇಮಕ ಮಾಡಲಾಗುತ್ತಿದೆ. ಅಲ್ಲದೇ ಬೂಸ್ಟರ್ ಡೋಸ್ ಲಸಿಕೆಯನ್ನು ಕೂಡ ಪೋಲಿಂಗ್ ಆಫೀಸರ್ ಗಳಿಗೆ ನೀಡಲಾಗುತ್ತಿದೆ. ಜೊತೆಗೆ ಚುನಾವಣಾ ಕರ್ತವ್ಯ ನಿರತ ನೌಕರರನ್ನು ಕೊರೋನಾ ವಾರಿಯರ್ಸ್ ಗಳೆಂದು ಘೋಷಣೆ ಮಾಡಲಾಗುತ್ತದೆ ಎಂಬುದಾಗಿ ತಿಳಿಸಿದರು.

ರಾಜಕೀಯ ಪಕ್ಷಗಳು, ರಾಜಕೀಯ ನಾಯಕರು ಕೊರೋನಾ ಕಾರಣದಿಂದಾಗಿ ಚುನಾವಣಾ ಪ್ರಚಾರವನ್ನು ಡಿಜಿಟಲ್ ಮಾಧ್ಯಮಗಳ ಮೂಲಕ ನಡೆಸುವಂತೆ ಸೂಚಿಸಿದರು. ಈ ಮೂಲಕ ವರ್ಚುವಲ್​ ಕ್ಯಾಂಪೇನ್​ಗೆ ಮ್ತ್ರ ಅವಕಾಶ ಎಮದು ತಿಳಿಸಿದರು.

ಜನವರಿ 15, 2022ವರೆಗೆ ಯಾವುದೇ ಪಕ್ಷದ ಪಾದಯಾತ್ರೆ, ವಾಹನ ಯಾತ್ರೆ, ಬೈಕ್ ರ್ಯಾಲಿಯನ್ನು ನಿಷೇಧಿಸಲಾಗಿದೆ. ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8ಗಂಟೆಯವರೆಗೆ ಯಾವುದೇ ಪಾದಯಾತ್ರೆ, ಪ್ರಚಾರಕ್ಕೆ ಅವಕಾಶ ಇಲ್ಲ. ಮತಏಣಿಕೆಯ ಸಂದರ್ಭದಲ್ಲಿ ಯಾವುದೇ ಸಂಭ್ರಮಾಚರಣೆಗೆ ಅವಕಾಶ ಇಲ್ಲ ಎಂದರು.

5 ರಾಜ್ಯಗಳಲ್ಲಿ 7 ಹಂತದಲ್ಲಿ ಚುನಾವಣೆ:
3 ರಾಜ್ಯಗಳಲ್ಲಿ ಫೆಬ್ರವರಿ 14ರಂದು
ಫೆಬ್ರವರಿ 14 ರಂದು ಪಂಜಾಬ್, ಗೋವಾ, ಉತ್ತರಾಖಂಡ್‌ನಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಪಂಜಾಬ್‌ನ 117 ಕ್ಷೇತ್ರಗಳಿಗೆ ಮತದಾನ, ಗೋವಾದ 40 ಕ್ಷೇತ್ರಗಳಿಗೆ ಮತದಾನ, ಉತ್ತರಾಖಂಡ್‌ನ 70 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಮಾರ್ಚ್ 10ರಂದು ಚುನಾವಣಾ ಫಲಿತಾಂಶ ಪ್ರಕಟ ಆಗಲಿದೆ.

ಉತ್ತರ ಪ್ರದೇಶದ 403 ಕ್ಷೇತ್ರಗಳಿಗೆ 7ಹಂತದಲ್ಲಿ ಮತದಾನ
ಫೆಬ್ರವರಿ 10ರಂದು ಮೊದಲ ಹಂತದ ಮತದಾನ
ಫೆಬ್ರವರಿ 14ರಂದು 2ನೇ ಹಂತದ ಮತದಾನ
ಫೆಬ್ರವರಿ 20ರಂದು 3ನೇ ಹಂತದ ಮತದಾನ
ಫೆಬ್ರವರಿ 23ರಂದು 4ನೇ ಹಂತದ ಮತದಾನ
ಫೆಬ್ರವರಿ 27ರಂದು 5ನೇ ಹಂತದ ಮತದಾನ
ಮಾರ್ಚ್ 3ರಂದು 6ನೇ ಹಂತದ ಮತದಾನ
ಮಾರ್ಚ್ 7ರಂದು 7ನೇ ಹಂತದ ಮತದಾನ
ಮಾರ್ಚ್ 10ರಂದು ಚುನಾವಣಾ ಫಲಿತಾಂಶ ಪ್ರಕಟ ಆಗಲಿದೆ.

ಮಣಿಪುರದ 60 ಕ್ಷೇತ್ರಗಳಿಗೆ 2 ಹಂತದಲ್ಲಿ ಮತದಾ
ಫೆಬ್ರವರಿ 27ರಂದು ಮೊದಲ ಹಂತದ ಮತದಾನ
ಮಾರ್ಚ್ 3ರಂದು 2ನೇ ಹಂತದ ಮತದಾನ
ಮಾರ್ಚ್ 10ರಂದು ಚುನಾವಣಾ ಫಲಿತಾಂಶ ಪ್ರಕಟ ಆಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!