ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ ಡೇಟ್ ಫಿಕ್ಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಿಸಿದೆ.
ನವೆಂಬರ್ 12ರಂದು ಹಿಮಾಚಲ ಪ್ರದೇಶದಲ್ಲಿ ಚುನಾವಣೆ ನಡೆಯಲಿದ್ದು, ಒಂದೇ ಹಂತದಲ್ಲಿ ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಮುಖ್ಯ ಆಯುಕ್ತರು ತಿಳಿಸಿದ್ದಾರೆ.
ಡಿಸೆಂಬರ್ 8ರಂದು ಹಿಮಾಚಲ ಪ್ರದೇಶ ಚುನಾವಣಾ ಫಲಿತಾಂಶ ಹೊರಬೀಳಲಿದೆ. ಎಲ್ಲಾ 68 ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ.
ಹಿಮಾಚಲ ಪ್ರದೇಶ ವಿಧಾನಸಭೆಯ ಅವಧಿ 2023 ಜನವರಿ 8ರವರೆಗಿದ್ದು, ವಿಧಾನಸಭೆಯಲ್ಲಿ ಬಿಜೆಪಿಯ 45 ಶಾಸಕರು ಹಾಗೂ ಕಾಂಗ್ರೆಸ್ ನ 20 ಶಾಸಕರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!