ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾರ್ಚ್ 3 ರಿಂದ ಕರ್ನಾಟಕ ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ. ಮಾರ್ಚ್ 7 ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ. ಬಳಿಕ ಮೂರು ದಿನಗಳ ಕಾಲ ರಾಜ್ಯಪಾಲರ ಭಾಷಣದ ಕುರಿತು ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಇಂದು ರೈತರು ಮತ್ತು ರೈತ ಸಂಘ-ಸಂಸ್ಥೆಗಳ ಜೊತೆ ಸಭೆ ನಡೆಸಿದ ಸಿದ್ದರಾಮಯ್ಯ. “ನಾನು ಸದಾ ರೈತ ಕುಲದ ಪರವಾಗಿ ಇರುತ್ತೇನೆ. ರೈತರ ಬೇಡಿಕೆಗಳನ್ನು ನಿರಂತರವಾಗಿ ಹಂತ ಹಂತವಾಗಿ ಈಡೇರಿಸುತ್ತಲೇ ಇದ್ದೇವೆ. ಅತಿ ಹೆಚ್ಚು ಉದ್ಯೋಗ ಅವಲಂಭನೆ ಇರುವುದು ಕೃಷಿಯಲ್ಲೇ. ಆದ್ದರಿಂದ ರೈತರ ಬೇಡಿಕೆಗಳಿಗೆ ನಮ್ಮದು ಪ್ರಥಮ ಆದ್ಯತೆ” ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.