IPL-2023 ಮಿನಿ ಹರಾಜಿಗೆ ಡೇಟ್ ಫಿಕ್ಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ 2023ರ ಟೂರ್ನಿ ಗೆ ಸಿದ್ಧತೆಗಳು ಆರಂಭಗೊಂಡಿದೆ. ಬಿಸಿಸಿಐ ಕೂಡ ಮಿನಿ ಐಪಿಎಲ್ ಹರಾಜು ಪ್ರಕ್ರಿಯೆಗೆ ಕೆಲಸ ಆರಂಭಿಸಿದೆ. ಬಿಸಿಸಿಐ ಮೂಲಗಳ ಪ್ರಕಾರ ಡಿಸೆಂಬರ್ 16ಕ್ಕೆ ಐಪಿಎಲ್ ಆಟಾಗರರ ಮಿನಿ ಹರಾಜು ನಡೆಯಲಿದೆ.

2022ರ ಐಪಿಎಲ್ ಟೂರ್ನಿಗಾಗಿ ಈ ವರ್ಷದ ಫೆಬ್ರವರಿಯಲ್ಲಿ ಮೆಘಾ ಐಪಿಎಲ್ ಹರಾಜು ನಡೆದಿತ್ತು. ಈ ಮೂಲಕ ಬಹುತೇಕ ಆಟಗಾರರು ಅದಲು ಬದಲಾಗಿದ್ದರು. ಇದೀಗ ಮಿನಿ ಹರಾಜು ನಡೆಯಲಿದೆ. ಆದರೆ ಈ ಬಾರಿಯ ಹರಾಜು ಪ್ರಕ್ರಿಯೆ ಎಲ್ಲಿ ನಡೆಯಲಿದೆ ಅನ್ನೋದು ಇನ್ನೂ ನಿರ್ಧಾರವಾಗಿಲ್ಲ.

ಫ್ರಾಂಚೈಸಿಗಳು ಹರಾಜಿಗೂ ಮುನ್ನ ಕೆಲವೇ ಕೆಲವು ಆಟಗಾರರನ್ನು ರಿಲೀಸ್ ಮಾಡಲಿದೆ. ರಿಲೀಸ್ ಆದ ಹಾಗೂ ಇತರ ಆಟಗಾರರು ಹರಾಜಿನಲ್ಲಿ ಪಾಲ್ಗೊಳ್ಳಲಿದ್ದಾರೆ. ನವೆಂಬರ್ ತಿಂಗಳಲ್ಲಿ ಪ್ರತಿ ಫ್ರಾಂಚೈಸಿ ತಂಡದಲ್ಲಿ ಉಳಿಸಿಕೊಂಡ ಹಾಗೂ ರಿಲೀಸ್ ಮಾಡಿದ ಆಟಗಾರರ ಪಟ್ಟಿಯನ್ನು ನೀಡಬೇಕಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!