ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಸಿದ್ದ ಬಸವನಗುಡಿ ಕಡಲೇಕಾಯಿ ಪರಿಷೆ ನ.25 ಮತ್ತು 26 ರಂದು ನಡೆಯಲಿದೆ.
ಮುಜರಾಯಿ ಇಲಾಖೆ ಇಂದು ದಿನಾಂಕ ನಿಗದಿ ಮಾಡಿದೆ. ಎರಡು ದಿನಗಳ ಕಾಲ ನಡೆಯಲಿರುವ ಕಡಲೆಕಾಯಿ ಪರಿಷೆಗೆ ವ್ಯಾಪಾರಿಗಳಿಂದ ಸುಂಕ ವಸೂಲಾತಿಗೆ ಬ್ರೇಕ್ ಹಾಕಲು ಇಲಾಖೆ ನಿರ್ಧರಿಸಿದೆ.ಸಚಿವ ರಾಮಲಿಂಗಾ ರೆಡ್ಡಿಇಂದು ಅಧಿಕಾರಿಗಳ ಜೊತೆ ಸಭೆ ಮಾಡಿ ಕಡಲೆಕಾಯಿ ಪರಿಷೆ ಸಂಬಂಧ ಮಾರ್ಗಸೂಚಿ ಬಿಡುಗಡೆ ಮಾಡಲಿದ್ದಾರೆ.
ನ.15 ರಿಂದ ಮಲ್ಲೇಶ್ವರಂ ಕಡಲೆಕಾಯಿ ಪರಿಷೆ ಆರಂಭವಾಗಲಿದ್ದು ಸಂಜೆ 4.30ಕ್ಕೆ ಕೇಂದ್ರದ ಮಾಜಿ ಸಚಿವ ವೀರಪ್ಪ ಮೊಯ್ಲಿ ಉದ್ಘಾಟಿಸಲಿದ್ದಾರೆ.