April 6, 2026
Monday, April 6, 2026
spot_img

2nd PUC ಫಲಿತಾಂಶ ಘೋಷಣೆಗೆ ಡೇಟ್ ಫಿಕ್ಸ್?: ರಿಸಲ್ಟ್ ನೋಡೋದು ಹೇಗೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿರುವ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಣೆಗೆ ಕ್ಷಣಗಣನೆ ಆರಂಭವಾಗಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಾಳೆ, ಅಂದರೆ ಏಪ್ರಿಲ್ 7 ರಂದು ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ. ಆದರೆ ಈ ಬಗ್ಗೆ ಇನ್ನೂ ಅಧಿಕೃತ ಘೋಷಣೆ ಹೊರಬಂದಿಲ್ಲ. ವಿವಿಧ ಮಾಧ್ಯಮ ವರದಿಗಳ ಪ್ರಕಾರ ನಾಳೆ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಹೆಚ್ಚಾಗಿದೆ.

ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯದಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಳೆದ ವರ್ಷವೂ ಇದೇ ಅವಧಿಯಲ್ಲಿ ಫಲಿತಾಂಶ ಪ್ರಕಟವಾಗಿದ್ದ ಹಿನ್ನೆಲೆಯಲ್ಲಿ, ಈ ಬಾರಿಯೂ ಏಪ್ರಿಲ್ ಮೊದಲ ವಾರದಲ್ಲೇ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ:

ಫಲಿತಾಂಶ ಪ್ರಕಟವಾದ ನಂತರ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ಗಳಾದ karresults.nic.in ಮತ್ತು kseab.karnataka.gov.in ಮೂಲಕ ತಮ್ಮ ಅಂಕಪಟ್ಟಿಯನ್ನು ಪರಿಶೀಲಿಸಬಹುದು. ವೆಬ್‌ಸೈಟ್‌ನಲ್ಲಿ “Karnataka 2nd PUC Result 2026” ಲಿಂಕ್ ಮೇಲೆ ಕ್ಲಿಕ್ ಮಾಡಿ, ನೋಂದಣಿ ಸಂಖ್ಯೆ ಹಾಗೂ ಅಗತ್ಯ ಮಾಹಿತಿಯನ್ನು ನಮೂದಿಸಿದ ಬಳಿಕ ಫಲಿತಾಂಶ ತೆರೆದುಕೊಳ್ಳಲಿದೆ.

ವೆಬ್‌ಸೈಟ್‌ನಲ್ಲಿ ತಾಂತ್ರಿಕ ತೊಂದರೆ ಉಂಟಾದರೆ ವಿದ್ಯಾರ್ಥಿಗಳಿಗೆ ಮತ್ತೊಂದು ಸುರಕ್ಷಿತ ಆಯ್ಕೆಯಾಗಿ ಡಿಜಿಲಾಕರ್ ಸೌಲಭ್ಯವೂ ಲಭ್ಯವಿದೆ. digilocker.gov.in ನಲ್ಲಿ ಕೂಡ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪರಿಶೀಲಿಸಲು ಅವಕಾಶ ನೀಡಲಾಗಿದೆ. ಮಂಡಳಿಯಿಂದ ಅಪ್ಲೋಡ್ ಮಾಡಲಾಗುವ ಡಿಜಿಟಲ್ ಮಾರ್ಕ್ಸ್ ಕಾರ್ಡ್ ಅನ್ನು ವಿದ್ಯಾರ್ಥಿಗಳು ಅಲ್ಲಿ ನೇರವಾಗಿ ವೀಕ್ಷಿಸಬಹುದು ಮತ್ತು ಡೌನ್‌ಲೋಡ್ ಮಾಡಿಕೊಳ್ಳಬಹುದು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !