January17, 2026
Saturday, January 17, 2026
spot_img

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಡೇಟ್ ಫಿಕ್ಸ್: ಮೂರು ಕಡೆ ಚಿತ್ರ ಪ್ರದರ್ಶನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿನಿರಸಿಕರು ನಿರೀಕ್ಷೆಯಿಂದ ಕಾಯುತ್ತಿದ್ದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 2026ರ ಆವೃತ್ತಿಗೆ ಅಧಿಕೃತ ದಿನಾಂಕ ಪ್ರಕಟವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಈ ಕುರಿತು ಮಾಹಿತಿ ನೀಡಿದ್ದು, ಜನವರಿ 29ರಿಂದ ಫೆಬ್ರವರಿ 6ರವರೆಗೆ ಒಂಬತ್ತು ದಿನಗಳ ಕಾಲ ಚಲನಚಿತ್ರೋತ್ಸವ ನಡೆಯಲಿದೆ ಎಂದು ತಿಳಿಸಿದ್ದಾರೆ.

ಪ್ರತಿವರ್ಷದಂತೆ ಈ ಬಾರಿಯೂ ದೇಶಿ ಹಾಗೂ ವಿದೇಶಿ ಸಿನಿಪ್ರೇಮಿಗಳಿಗೆ ಚಿತ್ರೋತ್ಸವ ವಿಶಿಷ್ಟ ಅನುಭವ ನೀಡಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಈ ಬಾರಿ ಚಿತ್ರೋತ್ಸವದ ಸ್ವರೂಪದಲ್ಲೂ ಬದಲಾವಣೆ ಕಂಡುಬಂದಿದೆ. ಇದುವರೆಗೆ ಒರಿಯನ್ ಮಾಲ್‌ಗೆ ಸೀಮಿತವಾಗಿದ್ದ ಸಿನಿಮಾ ಪ್ರದರ್ಶನ, 2026ರಲ್ಲಿ ಮೂರು ವಿಭಿನ್ನ ಕೇಂದ್ರಗಳಲ್ಲಿ ನಡೆಯಲಿದೆ. ಲುಲು ಮಾಲ್, ಚಾಮರಾಜಪೇಟೆಯ ಡಾ.ರಾಜ್‌ಕುಮಾರ್ ಭವನ ಹಾಗೂ ಬನಶಂಕರಿಯ ಸುಚಿತ್ರಾ ಫಿಲ್ಮ್ ಸೊಸೈಟಿಯಲ್ಲಿ ಒಂದೇ ಸಮಯದಲ್ಲಿ ಚಿತ್ರಗಳನ್ನು ಪ್ರದರ್ಶಿಸಲು ವ್ಯವಸ್ಥೆ ಮಾಡಲಾಗಿದೆ. ಇದರಿಂದ ಹೆಚ್ಚಿನ ಪ್ರೇಕ್ಷಕರಿಗೆ ಸಿನಿಮಾಗಳನ್ನು ವೀಕ್ಷಿಸಲು ಅವಕಾಶ ಸಿಗಲಿದೆ.

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಈಗಾಗಲೇ 110 ಸಿನಿಮಾಗಳು ಆಯ್ಕೆಯಾಗಿವೆ ಎಂದು ಮುಖ್ಯಮಂತ್ರಿ ಮಾಹಿತಿ ನೀಡಿದ್ದಾರೆ. ಸುಮಾರು 60 ದೇಶಗಳ ಚಿತ್ರಗಳು ಪ್ರದರ್ಶನಗೊಳ್ಳಲಿದ್ದು, ಆಸ್ಕರ್ ಪ್ರಶಸ್ತಿಗೆ ಶಾರ್ಟ್ ಲಿಸ್ಟ್ ಆಗಿರುವ ಚಿತ್ರಗಳನ್ನೂ ವೀಕ್ಷಿಸಲು ಅವಕಾಶ ದೊರೆಯಲಿದೆ.

ಈ ವರ್ಷದ ಚಲನಚಿತ್ರೋತ್ಸವದಲ್ಲಿ ಮಹಿಳಾ ಸಬಲೀಕರಣ ಪ್ರಮುಖ ಥೀಮ್ ಆಗಿದ್ದು, ಅದರ ಕುರಿತು ಚರ್ಚೆಗಳು ನಡೆಯಲಿವೆ. ಚಿತ್ರೋತ್ಸವವು ಸಿನಿಮಾ ಮಾತ್ರವಲ್ಲ, ವಿಚಾರ ವಿನಿಮಯಕ್ಕೂ ವೇದಿಕೆಯಾಗಲಿದೆ.

Must Read

error: Content is protected !!