ಕರ್ನಾಟಕ ವಿಧಾನಪರಿಷತ್ತಿನ ಮೂರು ಸ್ಥಾನಗಳಿಗೆ ಉಪ ಚುನಾವಣೆಗೆ ಡೇಟ್ ಫಿಕ್ಸ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಚುನಾವಣಾ ಆಯೋಗದಿಂದ ಕರ್ನಾಟಕ ವಿಧಾನಪರಿಷತ್ತಿನ ಮೂರು ಸ್ಥಾನಗಳಿಗೆ ಉಪ ಚುನಾವಣೆಯನ್ನು ಘೋಷಣೆ ಮಾಡಿದೆ.

ಈ ಸಂಬಂಧ ಇಂದು ಕೇಂದ್ರ ಚುನಾವಣಾ ಆಯೋಗದಿಂದ ಅಧಿಸೂಚನೆಯನ್ನು ಹೊರಡಿಸಿದ್ದು, ಶಾಸಕ ಲಕ್ಷ್ಮಣ್ ಸವದಿ ಅವರ ವಿಧಾನ ಪರಿಷತ್ ಸದಸ್ಯ ಸ್ಥಾನದ ಅವಧಿ ಜೂನ್.14ಕ್ಕೆ, ಬಾಬು ರಾವ್ ಚಿಂಚನಸೂರ್ ಜೂನ್.17ರಂದು ಹಾಗೂ ಆರ್ ಶಂಕರ್ ಅವರ ಅಧಿಕಾರಾವಧಿ ಜೂನ್.30ರಂದು ಕೊನೆಗೊಳ್ಳಲಿದೆ .

ಹೀಗಾಗಿ ಈ ಮೂರು ಸ್ಥಾನಗಳಿಗೆ ಜೂನ್.30ರಂದು ಉಪ ಚುನಾವಣೆ ನಡೆಸುವುದಾಗಿ ತಿಳಿಸಿದೆ.

ಇನ್ನೂ ಜೂನ್.13ರಂದು ಅಧಿಸೂಚನೆಯನ್ನು ಹೊರಡಿಸಲಾಗಿತ್ತದೆ. ಜೂನ್.20ರಂದು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ. ಜೂನ್.21ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಜೂನ್.23ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಜೂನ್. 30ರಂದು ಮತದಾನವನ್ನು ನಿಗದಿ ಪಡಿಸಲಾಗಿದೆ.

ಜೂನ್.30ರಂದು ಬೆಳಿಗ್ಗೆ 9 ರಿಂದ 4 ಗಂಟೆಯವರೆಗೆ ನಡೆಸಲಾಗುತ್ತದೆ. ಸಂಜೆ 5 ಗಂಟೆಗೆ ಮತಗಳ ಏಣಿಕೆ ಕಾರ್ಯ ನಡೆದು, ಫಲಿತಾಂಶ ಅಂದೇ ಘೋಷಣೆಯಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!