ಜಾತಿಗಣತಿಗೆ ದಿನಾಂಕ ಫಿಕ್ಸ್‌.. ಮೊಬೈಲ್‌ ಆ್ಯಪ್ ಬಳಸಿ ಸಮೀಕ್ಷೆ ನಡೆಸಲು ತೀರ್ಮಾನ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೊನೆಗೂ ರಾಜ್ಯದಲ್ಲಿ ಜಾತಿಗಣತಿಗೆ ದಿನಾಂಕ ಫಿಕ್ಸ್ ಆಗಿದೆ. ಸೆ.22 ರಿಂದ ಅ.7 ರ ವರೆಗೆ ಸಮೀಕ್ಷೆ ನಡೆಸಲು ಸರ್ಕಾರ ನಿರ್ಧರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಸಭೆ ನಡೆಸಿದ ಸಿಎಂ, ಒಟ್ಟು 15 ದಿನಗಳ ಕಾಲ ಸಮೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಅಕ್ಟೋಬರ್ ಕೊನೆಯಲ್ಲಿ ಸಮೀಕ್ಷೆ ವರದಿಯನ್ನು ಸಲ್ಲಿಸಬೇಕು. ತರಬೇತಿ ಸೇರಿದಂತೆ ಸಮೀಕ್ಷೆಗೆ ಪೂರ್ವಭಾವಿ ಸಿದ್ಧತೆಗಳನ್ನು ಈಗಲೇ ಆರಂಭಿಸಲು ಸೂಚನೆ ನೀಡಿದ್ದಾರೆ.

ಈ ಬಾರಿ ಮೊಬೈಲ್ ಆ್ಯಪ್ ಬಳಸಿಕೊಂಡು ಸಮೀಕ್ಷೆ ನಡೆಸಲಾಗುವುದು ಎಂದು ಹೇಳಲಾಗಿದೆ. ತೆಲಂಗಾಣದಲ್ಲಿ ಕೈಗೊಳ್ಳಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿ ಕುರಿತು ಅಧ್ಯಯನ ನಡೆಸಲು ಸೂಚಿಸಲಾಗಿದೆ. ಸಮೀಕ್ಷೆ ಕಾರ್ಯದ ಮೇಲುಸ್ತುವಾರಿಗೆ ಉನ್ನತಮಟ್ಟದ ಸಮಿತಿ ರಚಿಸಲು ತಿರ್ಮಾನಿಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!