ಹೊಸದಿಗಂತ ಡಿಜಿಟಲ್ ಡೆಸ್ಕ್:
ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಚುನಾವಣೆಗೆ ಡೇಟ್ ಫಿಕ್ಸ್ ಆಗಿದ್ದು, ಮೇ.25, 2026ರ ಒಳಗಾಗಿ ಚುನಾವಣೆ ನಡೆಸುವುದಾಗಿ ಚುನಾವಣಾ ಆಯೋಗ ಮಹತ್ವದ ಘೋಷಣೆ ಮಾಡಿದೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್ ಸಂಗ್ರೇಶಿ ಅವರು, ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಮೇ 25ರ ನಂತರ ಜೂನ್ 30ರೊಳಗೆ ಚುನಾವಣೆ ನಡೆಸಲಾಗುವುದು. 2025ರ ಅಕ್ಟೋಬರ್ 1ರ ಮಾಹಿತಿಯಂತೆ ಮತದಾರರ ಕರಡು ಪಟ್ಟಿ ತಯಾರಿಸಲಾಗಿದೆ ಎಂದಿದ್ದಾರೆ.
ಇಂದಿನಿಂದ ಫೆಬ್ರುವರಿ 3ರವರೆಗೆ ಮತಗಟ್ಟೆ ಅಧಿಕಾರಿಗಳು (ಬಿಎಲ್‌ಒ) ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು, ಈ ಅವಧಿಯಲ್ಲಿ ಹಕ್ಕು ಹಾಗೂ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಹಕ್ಕು ಹಾಗೂ ಆಕ್ಷೇಪಣೆಗಳ ವಿಲೇವಾರಿಯು ಫೆಬ್ರವರಿ 4ರಿಂದ 18ರವರೆಗೆ ನಡೆಯಲಿದ್ದು, ಮಾರ್ಚ್ 16ರಂದು ಮತದಾರರ ಅಂತಿಮ ಪಟ್ಟಿ ಪ್ರಕಟಿಸಲಾಗುತ್ತದೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್. ಸಂಗ್ರೇಶಿ ಹೇಳಿದ್ದಾರೆ.


