ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರಕಾರದ ಮತ್ತೊಂದು ಗ್ಯಾರಂಟಿ ಗೃಹಲಕ್ಷ್ಮಿ ಯೋಜನೆ ಆ. 16 ರಿಂದ ಜಾರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದಲ್ಲಿ ಇಂದು ಹಮ್ಮಿಕೊಂಡಿದ್ದ ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ ಅವರು ಚಾಲನೆ ನೀಡಿ, ಮಾತನಾಡಿದ ಅವರು, ಆ. 16 ರಿಂದ ಗೃಹಲಕ್ಷ್ಮಿ ಯೋಜನೆ ಜಾರಿಗೆ ಬರಲಿದೆ ಎಂದರು.
ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿ ಖಾತೆಗೆ ಮಾಸಿಕ ಎರಡು ಸಾವಿರ ರೂಪಾಯಿ ಜಮಾ ಮಾಡಲಾಗುವುದು. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 16 ರಿಂದ ಚಾಲನೆ ನೀಡಲಾಗುವುದು.