Wednesday, December 6, 2023

Latest Posts

ಭಾರತ-ಆಫ್ಘಾನಿಸ್ತಾನ ಟಿ20 ಸರಣಿಗೆ ಡೇಟ್ ಫಿಕ್ಸ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ವಿಶ್ವಕಪ್ ಟೂರ್ನಿ ಮುಕ್ತಾಯದ ಬಳಿಕ ಭಾರತ ಸತತ ಸರಣಿಗೆ ಸಜ್ಜಾಗುತ್ತಿದೆ. ನವೆಂಬರ್ 23ರಿಂದ ಭಾರತ-ಆಸ್ಟ್ರೇಲಿಯಾ ಟಿ20 ಸರಣಿ ಆರಂಭಗೊಳ್ಳುತ್ತಿದೆ. ಬಳಿಕ ಸೌತ್ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ. ಇದೀಗ ಜನವರಿಯಲ್ಲಿ ಭಾರತ ಹಾಗೂ ಆಫ್ಘಾನಿಸ್ತಾನ ನಡುವಿನ ಟಿ20 ಸರಣಿ ವೇಳಾಪಟ್ಟಿ ಪ್ರಕಟಗೊಂಡಿದೆ. 3 ಪಂದ್ಯದ ಟಿ20 ಸರಣಿಗೆ ಭಾರತ ಆತಿಥ್ಯವಹಿಸಲಿದೆ.

ಭಾರತ ಹಾಗೂ ಆಫ್ಘಾನಿಸ್ತಾನ ನಡುವಿನ ಮೊದಲ ಟಿ20 ಪಂದ್ಯ ಜನವರಿ 11ರಂದು ನಡೆಯಲಿದೆ. ಈ ಪಂದ್ಯವನ್ನು ಮೊಹಾಲಿಯಲ್ಲಿ ಆಯೋಜಿಸಲಾಗಿದೆ. ಎರಡನೇ ಪಂದ್ಯ ಜನವರಿ 14 ರಂದು ಇಂದೋರ್‌ನಲ್ಲಿ ಆಯೋಜಿಸಲಾಗಿದೆ. ಇನ್ನು ಮೂರನೇ ಹಾಗೂ ಅಂತಿಮ ಪಂದ್ಯ ಜನವರಿ 17 ರಂದು ಬೆಂಗಳೂರಿನಲ್ಲಿ ನಡೆಯಲಿದೆ.

ಈಗಾಗಲೇ ಭಾರತ ಆಸ್ಟ್ರೇಲಿಯಾ ವಿರುದ್ಧ 5 ಪಂದ್ಯಗಳ ಟಿ20 ಸರಣಿ ಆಡಲು ಸಜ್ಜಾಗಿದೆ. ನವೆಂಬರ್ 23 ರಿಂದ ಡಿಸೆಂಬರ್ 3ರ ವರೆಗೆ ಟಿ20 ಪಂದ್ಯ ನಡೆಯಲಿದೆ. ಈ ಸರಣಿ ಮುಗಿದ ಬೆನ್ನಲ್ಲೇ ಟೀಂ ಇಂಡಿಯಾ ಸಂಪೂರ್ಣ ತಂಡ ಸೌತ್ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ. ಡಿಸೆಂಬರ್ 10 ರಿಂದ ಜನನವರಿ 07ರ ವರೆಗೆ ಭಾರತ ತಂಜ ಸೌತ್ ಆಫ್ರಿಕಾ ವಿರುದ್ದ ಸರಣಿ ಆಡಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!