ಹೊಸದಿಗಂತ ವರದಿ,ಶಿವಮೊಗ್ಗ:
ವಿಮಾನ ನಿಲ್ದಾಣ ಕಾಮಗಾರಿ ಮುಕ್ತಾಯ ಹಂತದಲ್ಲಿದೆ. ಫೆಬ್ರವರಿ 27 ರಂದು ಪ್ರದಾನಿ ನರೇಂದ್ರ ಮೋದಿ ಅವರೇ ಉದ್ಘಾಟಿಸಲಿದ್ದಾರೆ ಎಂದು ನಿಕಟ ಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಸೋಗಾನೆಯಲ್ಲಿ ಬುಧವಾರ ಸಂಜೆ ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಿಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದರು.
ದೇಶದಲ್ಲೇ ಅತ್ಯಂತ ಕಡಿಮೆ ವೆಚ್ಚದಲ್ಲಿ ನಿರ್ಮಾಣ ಆಗಿರುವ ವಿಮಾನ ನಿಲ್ದಾಣ ಇದಾಗಿದೆ. ಕೇವಲ 449.22 ಕೋಟಿ ವೆಚ್ಚದಲ್ಲಿ ನಿಲ್ದಾಣ ನಿರ್ಮಾಣ ಮಾಡಲಾಗಿದೆ. ಇನ್ನು ಅಲ್ಪ ಕಾಮಗಾರಿ ಬಾಕಿ ಇದ್ದು, ಶೀಘ್ರದಲ್ಲೇ ಪೂರ್ಣ ಮಾಡಲಾಗುವುದು ಎಂದರು.
ಬೆಂಗಳೂರು ಬಳಿಕ ಅತ್ಯಂತ ಸುಸಜ್ಜಿತ ಹಾಗೂ ಎಲ್ಲಾ ವ್ಯವಸ್ಥೆ ಇರುವ ವಿಮಾನ ನಿಲ್ದಾಣ ಇದಾಗಿದೆ. ರಾತ್ರಿ ಇಳಿಯುವ ವ್ಯವಸ್ಥೆ ಯೂ ಇದೆ. ನಿಲ್ದಾಣ ನಿರ್ಮಾಣ ಕ್ಕೆ ಸ್ಥಳೀಯ ರೈತರ ಸಹಕಾರವನ್ನು ಮರೆಯುವುದಿಲ್ಲ ಎಂದರು.
ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಎಸ್.ರುದ್ರೇಗೌಡ, ಜಿಲ್ಲಾಧಿಕಾರಿ ಡಾ.ಸೆಲ್ವಮಙಿ, ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಜಿಪಂ ಸಿಇಒ ಪ್ರಕಾಶ್, ವಿಮಾನ ನಿಲ್ದಾಣ ಅಧಿಕಾರಿಗಳು ಹಾಜರಿದ್ದರು.