ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡು ಮಾಜಿ ಸಿಎಂ ದಿ.ಜಯಲಲಿತಾ (Jayalalithaa) ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಪ್ತಿಯಾದ ಒಡವೆಯನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸಲು ಕರ್ನಾಟಕ ಹೈಕೋರ್ಟ್ ಮಾರ್ಚ್ 6 ಮತ್ತು 7ರಂದು ದಿನಾಂಕ ನಿಗದಿಪಡಿಸಿದೆ.
ಇದೀಗ ಒಡವೆ ಸ್ವೀಕರಿಸಲು ತಮಿಳುನಾಡಿನಿಂದ ಇಬ್ಬರು ಅಧಿಕಾರಿಗಳ ನೇಮಕ ಮಾಡಲಾಗಿದೆ. ತಮಿಳುನಾಡು ಗೃಹ ಪ್ರಧಾನ ಕಾರ್ಯದರ್ಶಿ ಮತ್ತು ಐಜಿಪಿ ವಿಜಿಲೆನ್ಸ್ ಹಾಜರಿರಬೇಕು. ಒಡವೆ ತೆಗೆದುಕೊಂಡು ಹೋಗಲು 6 ಟ್ರಂಕ್ಗಳನ್ನು ತರುವಂತೆ ಕೋರ್ಟ್ ಸೂಚನೆ ನೀಡಿದೆ.
ವಿಡಿಯೋಗ್ರಾಫರ್, ಫೋಟೋಗ್ರಾಫರ್, ಎರಡೂ ದಿನಗಳು ಸಿಟಿ ಸಿವಿಲ್ ಕೋರ್ಟ್ನಲ್ಲಿ ಭದ್ರತೆ ಒದಗಿಸುವಂತೆ ವಿಶೇಷ ನ್ಯಾಯಾಧೀಶ ಮೋಹನ್ರಿಂದ ಸೂಚನೆ ನೀಡಲಾಗಿದೆ.
1996ರಲ್ಲಿ ಜಯಲಲಿತಾ ಅವರು ಅಕ್ರಮ ಆಸ್ತಿಗಳಿಸಿದ್ದಾರೆಂಬ ಆರೋಪದಲ್ಲಿ ಸಿಬಿಐ ದಾಳಿ ಅಧಿಕಾರಿಗಳು ಮಾಡಿದ್ದರು. 1997ರಲ್ಲಿ ಪ್ರಕರಣದ ಚಾರ್ಜ್‌ಶೀಟ್ ಕೂಡ ಸಲ್ಲಿಕೆಯಾಗಿತ್ತು. ಇದರ ವಿಚಾರಣೆ ನಡೆದು ಶಿಕ್ಷೆ ಪ್ರಕಟವಾಗುವ ಮುನ್ನವೇ ಜಯಲಲಿತಾ ಅವರು 2016 ರಲ್ಲಿ ಮೃತಪಟ್ಟಿದ್ದರು.
ಜಯಲಲಿತಾ ಅವರು 1991ರಿಂದ 96 ನಡುವೆ ಆದಾಯ ಮೀರಿ ಆಸ್ತಿ ಗಳಿಸಿರುವ ಆರೋಪ ಕೇಳಿಬಂದಿತ್ತು. ಚೆನ್ನೈನಲ್ಲಿ ಐಷಾರಾಮಿ ಬಂಗಲೆಗಳನ್ನು ಹೊಂದಿದ್ದರು, ಹೈದರಾಬಾದ್ ಬಳಿ ಫಾರ್ಮ್ ಹೌಸ್, ತಮಿಳುನಾಡಿನ ನೀಲಗಿರಿ ಪ್ರದೇಶದಲ್ಲಿ ಭಾರಿ ಚಹಾ ತೋಟ, ಬೆಲೆಬಾಳುವ ಆಭರಣ, ಕಾರ್ಖಾನೆಗಳು, ಬ್ಯಾಂಕ್ ಖಾತೆಗಳಲ್ಲಿ ಸಂಪತ್ತು ಕ್ರೋಢೀಕರಣ, ಐಷಾರಾಮಿ ಕಾರುಗಳನ್ನು ಹೊಂದಿದ್ದರು.