October 9, 2026
Friday, October 9, 2026
spot_img

ಕಾವೇರಿ ತಾಯಿಯ ಆಗಮನಕ್ಕೆ ಮುಹೂರ್ತ ಫಿಕ್ಸ್: ಅ.17ರಂದು ತೀರ್ಥೋದ್ಭವ

ಹೊಸದಿಗಂತ ವರದಿ ಮಡಿಕೇರಿ:

ಕಾವೇರಿಯ ಉಗಮಸ್ಥಾನ, ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ಅಕ್ಟೋಬರ್ 17ರ ರಾತ್ರಿ 7.50ಗಂಟೆಗೆ ಸಲ್ಲುವ ಮೇಷ ಲಗ್ನದಲ್ಲಿ ಮಾತೆ ಕಾವೇರಿಯು ತೀರ್ಥರೂಪಿಣಿಯಾಗಿ ಆವೀರ್ಭವಿಸಲಿದ್ದಾಳೆ.

ತಲಕಾವೇರಿ ಹಾಗೂ ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯಗಳಲ್ಲಿ ನಡೆಯಲಿರುವ ಜಾತ್ರೋತ್ಸವಕ್ಕೆ ಸಂಬಂಧಿಸಿದಂತೆ ಬುಧವಾರ ಭಾಗಮಂಡಲದಲ್ಲಿ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಗಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ:

ಸೆ.27ರಂದು ಬೆಳಗ್ಗೆ 8.45ಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಪತ್ತಾಯಕ್ಕೆ ಅಕ್ಕಿ ಹಾಕುವ ಮೂಲಕ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಲಿದ್ದು, ಅ.5ರಂದು ಬೆಳಗ್ಗೆ 10.35ಕ್ಕೆ ಸಲ್ಲುವ ವೃಷಭ ಲಗ್ನದಲ್ಲಿ ‘ಆಜ್ಞಾ ಮುಹೂರ್ತ’ ನೆರವೇರಲಿದೆ.

ಅ.15ರಂದು ಮಧ್ಯಾಹ್ನ 12.35ಕ್ಕೆ ಸಲ್ಲುವ ಧನು ಲಗ್ನದಲ್ಲಿ ‘ಅಕ್ಷಯ ಪಾತ್ರೆ’ ಕಾರ್ಯಕ್ರಮ ನಡೆಯಲಿದ್ದು, ಅದೇ ದಿನ ಸಂಜೆ 6.03ಕ್ಕೆ ಸಲ್ಲುವ ಮೀನ ಲಗ್ನದಲ್ಲಿ ‘ಕಾಣಿಕೆ ಡಬ್ಬಿ’ಗಳಿಗೆ ಪೂಜೆ ನೆರವೇರಿಸಲಾಗುತ್ತದೆ.

Must Read