ರಾಜ್ಯ ಸರಕಾರದ ನಾಲ್ಕನೇ ಗ್ಯಾರಂಟಿ ಯೋಜನೆ ಚಾಲನೆಗೆ ಡೇಟ್ ಫಿಕ್ಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಲ್ಲಿ 4 ನೇ ಗ್ಯಾರಂಟಿಯನ್ನು ಆಗಸ್ಟ್ 24 ರಂದು ಜಾರಿ ಮಾಡಲಾಗಿವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಹೇಳಿದ್ದಾರೆ.

ಕೆ.ಎ.ಎಸ್. ಅಧಿಕಾರಿಗಳ ಸಂಘದ ಶತಮಾನೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಭರವಸೆಯನ್ನು ನೀಡಿದೆ. ಅದ್ರಂತೆ ಮೂರೂ ಯೋಜನೆ ಜಾರಿಗೊಳಿಸಲಾಗಿದ್ದು, ಆಗಸ್ಟ್ 24 ರಂದು 4 ನೇ ಗ್ಯಾರಂಟಿ ಹಾಗೂ 5ನೇ ಗ್ಯಾರಂಟಿ ಡಿಸೆಂಬರ್ ಅಥವಾ ಜನವರಿ 2024 ರಲ್ಲಿ ಜಾರಿಯಾಗುವ ಸಾಧ್ಯತೆ ಇದೆ. ಗ್ಯಾರಂಟಿ ಯೋಜನೆಗಳ ಯಶಸ್ಸು ಅಧಿಕಾರಿಗಳ ಮೇಲೆ ಅವಲಂಬಿತವಾಗಿದೆ ಎಂದರು.

ಅಧಿಕಾರಿಗಳು ಪ್ರಾಮಾಣಿಕವಾಗಿ, ಜನಪರವಾಗಿ ಕೆಲಸ ಮಾಡಿದರೆ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ. ಸರ್ಕಾರದ ಅಧಿಕಾರಿ ಹಾಗೂ ನೌಕರರು ಬಡವರ ವಿರೋಧಿ, ಜನವಿರೋಧಿ, ಭ್ರಷ್ಟಾಚಾರದಲ್ಲಿ ತೊಡಗಬಾರದು. ಜಾತಿ ಧರ್ಮಗಳ ಕಲಹದಲ್ಲಿಯೂ ಇರಬಾರದು. ಧರ್ಮಕ್ಕೂ, ಆಡಳಿತಕ್ಕೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!