ರಾಜ್ಯದಲ್ಲಿ ಕಮಲ ಅರಳುವ ದಿನಾಂಕ ನಿಶ್ಚಯ : ರಾಜ್ಯ ಬಿಜೆಪಿಯಿಂದ ಟ್ವೀಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ಕರ್ನಾಟಕ ವಿಧಾನಸಭೆ ಚುನಾವಣೆಯ ದಿನಾಂಕ ಘೋಷಣೆಯ ಬೆನ್ನಲ್ಲೇ ರಾಜ್ಯದಲ್ಲಿ ಕಮಲ ಅರಳುವ ದಿನಾಂಕ ನಿಶ್ಚಯವಾಗಿದೆ ಎಂದು ರಾಜ್ಯ ಬಿಜೆಪಿಯು ಟ್ವೀಟ್‌ ಮಾಡಿದೆ.

ರಾಜ್ಯ ಬಿಜೆಪಿ ಟ್ವಿಟ್ಟರ್‌ ಖಾತೆಯಲ್ಲಿ, ರಾಜ್ಯದಲ್ಲಿ ಕಮಲ ಅರಳುವ ದಿನಾಂಕ ನಿಶ್ಚಯವಾಗಿದೆ, ಸ್ಪಷ್ಟ ಬಹುಮತದೊಂದಿಗೆ ಆಶೀರ್ವಾದ ಮಾಡಲು ಕನ್ನಡಿಗರು ಉತ್ಸುಕರಾಗಿದ್ದಾರೆ. ಪಕ್ಷವನ್ನು ಅಧಿಕಾರಕ್ಕೆ ತರಲು ಇಂದಿನಿಂದ ಹಗಲಿರುಳು ಶ್ರಮಿಸಲು ಕಾರ್ಯಕರ್ತರ ಪಡೆ ಸಜ್ಜಾಗಿದೆ.
ಕರ್ನಾಟಕ ಗೆಲ್ಲಲಿದೆ ಎಂದು ಟ್ವೀಟ್‌ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!