November 6, 2026
Friday, November 6, 2026
spot_img

ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ದಿನಾಂಕ ಫಿಕ್ಸ್: ಡಿ. 2ರಿಂದ ಕಲಾಪ ಆರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನದ ದಿನಾಂಕವನ್ನು ಸರ್ಕಾರ ಅಂತಿಮಗೊಳಿಸಿದೆ. ವಿಧಾನಸಭೆ ಕಾರ್ಯದರ್ಶಿಗಳು ಹೊರಡಿಸಿರುವ ಅಧಿಕೃತ ಪ್ರಕಟಣೆಯ ಪ್ರಕಾರ, ಡಿಸೆಂಬರ್ 2ರಿಂದ 11ರವರೆಗೆ ಅಧಿವೇಶನ ನಡೆಯಲಿದೆ.

ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಈ ಹಿಂದೆ ನವೆಂಬರ್ 30ರಿಂದ ಡಿಸೆಂಬರ್ 11ರವರೆಗೆ ಅಧಿವೇಶನ ನಡೆಸಲು ನಿರ್ಧರಿಸಲಾಗಿದ್ದ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ. ಸರ್ಕಾರದ ಸೂಚನೆಯಂತೆ ಕಡತವನ್ನು ಹಿಂಪಡೆದು, ಹೊಸ ದಿನಾಂಕಗಳನ್ನು ನಿಗದಿಪಡಿಸಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಕಳುಹಿಸಲಾಗಿತ್ತು.

ಇದನ್ನೂ ಓದಿ:

ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಧಿವೇಶನದ ದಿನಾಂಕದ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗಿದೆ. ಶನಿವಾರವೂ ಕಲಾಪ ನಡೆಸಲು ಸರ್ಕಾರ ನಿರ್ಧರಿಸಿದ್ದು, ಅಧಿವೇಶನದ ವೇಳಾಪಟ್ಟಿಯಂತೆ ಒಟ್ಟು ಒಂಬತ್ತು ದಿನಗಳ ಕಾಲ ಕಲಾಪ ನಡೆಯಲಿದೆ.

Must Read