ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಮತ್ತು ನಾಳೆ ಎರಡು ದಿನ ಚಿಕ್ಕಮಗಳೂರು ಭಾಗದಲ್ಲಿ ಮದ್ಯ ಮಾರಾಟ ಇರುವುದಿಲ್ಲ. ಹೌದು, ದತ್ತ ಜಯಂತಿಯಂದು ಚಿಕ್ಕಮಗಳೂರು, ಮೂಡಿಗೆರೆ, ಕೊಪ್ಪ, ಶೃಂಗೇರಿ, ನರಸಿಂಹರಾಜಪುರ, ತರೀಕೆರೆ ಮತ್ತು ಕಡೂರು ತಾಲೂಕುಗಳಲ್ಲಿ ಇಂದು ಮತ್ತು ನಾಳೆ ಮದ್ಯ ಮಾರಾಟ ಹಾಗೂ ಸರಬರಾಜು ನಿಷೇಧಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಅನುಸೂಯಾ ಜಯಂತಿ, ಶೋಭಾ ಯಾತ್ರೆ, ದತ್ತ ಜಯಂತಿ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಚಿಕ್ಕಮಗಳೂರು, ಮೂಡಿಗೆರೆ, ಕೊಪ್ಪ, ಶೃಂಗೇರಿ, ನರಸಿಂಹರಾಜಪುರ, ತರೀಕೆರೆ, ಕಡೂರು ತಾಲೂಕುಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.