ಅಮ್ಮ ಮೊಬೈಲ್ ಕಿತ್ತುಕೊಂಡಿದ್ದೆ ತಪ್ಪಾಯ್ತು: ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಮಗಳು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮನೆಯಲ್ಲಿ ಅತಿಯಾಗಿ ಮೊಬೈಲ್ ಬಳಕೆ ಮಾಡುತ್ತಿದ್ದ ಮಗಳಿಗೆ ಏಕಾಏಕಿ ಅಮ್ಮ ಮೊಬೈಲ್ ಮುಟ್ಟಬೇಡ ಎಂದು ಬೈದು, ಮೊಬೈಲ್ ಕಿತ್ತುಕೊಂಡಿದ್ದಾರೆ. ಇದರಿಂದ ಮನನೊಂದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸೋನಿ ಸಂತೋಷ ಬನವಾಸೆ (15) ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಈ ಘಟನೆ ಬೀದರ್ ಜಿಲ್ಲೆ ಕಮಲನಗರ ತಾಲೂಕಿನ ಡಿಗ್ಗಿ ಎಂಬ ಗ್ರಾಮದಲ್ಲಿ ನಡೆದಿದೆ.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳ ಪರಿಶೀಲನೆ ಮಾಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಕಮಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!